ಮಂಡ್ಯ :- ಆರ್ಎಸ್ಎಸ್, ಬಿಜೆಪಿ ಮುಖಂಡ ಹನಿಟ್ರ್ಯಾಪ್ ಸುಳಿಯಲ್ಲಿ ಸಿಲುಕಿ ಹಾಕಿಕೊಂಡಿದ್ದು, 50 ಲಕ್ಷ ಹಣವನ್ನು ಸುಲಿಗೆ ಮಾಡಿ ದ್ದಾರೆ. ಎಂದು ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಮುಖಂಡ, ಧಾರ್ಮಿಕ ಪರಿಷತ್ ಸದಸ್ಯ, ಶ್ರೀನಿಧಿ ಗೊಲ್ಡ್ ಮಾಲೀಕ ಜಗನ್ನಾಥ ಶೆಟ್ಟಿ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಗೆ ಕಳೆದ ತಿಂಗಳು ದೂರು ನೀಡಿದ್ದರು.
ಜಗನ್ನಾಥ ಶೆಟ್ಟಿ ಮಂಗಳೂರಿಗೆ ತೆರಳಲು ಮಂಡ್ಯದಲ್ಲಿ ಬಸ್ಗಾಗಿ ಕಾಯುತ್ತಿದ್ದರು. ಈ ವೇಳೆ ನಾಲ್ವರು ಮೈಸೂರಿಗೆ ಡ್ರಾಪ್ ಕೊಡುವುದಾಗಿ ಕಾರಿನಲ್ಲಿ ಕರೆದೊಯ್ದಿದ್ದರು.
ನಂತರ ಚಿನ್ನದ ಪರೀಕ್ಷೆಗೆಂದು ಕರೆದುಕೊಂಡು ಹೋಗಿ ಅಪಹರಿಸಿದ್ದಾರೆ. ಜಗನ್ನಾಥ ಶೆಟ್ಟಿ ಅವರನ್ನು ಅಪಹರಿಸಿ ಲಾಡ್ಜ್ ರೂಮ್ಗೆ ಕರೆದುಕೊಂಡು ಹೋಗಿದ್ದಾರೆ. ರೂಮ್ನಲ್ಲಿ ಯುವತಿ ಜೊತೆ ವಿಡಿಯೋ ಚಿತ್ರೀಕರಿಸಿಕೊಂಡು 4 ಕೋಟಿ ರೂ. ಬೇಡಿಕೆ ಇಟ್ಟಿದ್ದರು. ಅಂತಿಮವಾಗಿ ಜಗನ್ನಾಥ ಶೆಟ್ಟಿ 50 ಲಕ್ಷ ರೂಪಾಯಿ ನೀಡಿ ತೆರಳಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಗ್ಯಾಂಗ್ ಮತ್ತೆ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ಇದರಿಂದ ಜಗನ್ನಾಥ ಶೆಟ್ಟಿ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಸಮಾಜ ಸೇವೆ, ಮಾನವ ಹಕ್ಕು ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಮಂಡ್ಯದ ಸಲ್ಮಾಭಾನು ಮತ್ತು ತಂಡವನ್ನು ಪಶ್ಚಿಮ ಠಾಣೆ ಪೊಲೀಸರು ಬಂಧಸಿದ್ದರು.