Breaking News

ನಾಳೆ ದೊಡ್ಡಬಳ್ಳಾಪುರದಲ್ಲಿ ಬಿಜೆಪಿಯ `ಜನಸ್ಪಂದನ’ ಸಮಾವೇಶ : 3 ಲಕ್ಷಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆ

Spread the love

ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರದ ಸರ್ಕಾರದ ಮೂರು ವರ್ಷಗಳ ಸಾಧನೆಯ ಅನಾವರಣ’ ಸಮಾವೇಶ ಜನಸ್ಪಂದನಾ ಸಮಾವೇಶವು ನಾಳೆ ಮಧ್ಯಾಹ್ನ 12 ಗಂಟೆಗೆ ದೊಡ್ಡಬಳ್ಳಾಪುರದಲ್ಲಿ ನಡೆಯಲಿದ್ದು, ಮೂರು ಲಕ್ಷಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

 

ಜನಸ್ಪಂದನ ಸಾರ್ಥಕ ಸೇವೆ ಸಬಲೀಕರಣ ಸಮಾವೇಶವನ್ನು ಶನಿವಾರ ಮಧ್ಯಾಹ್ನ 12 ಗಂಟೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಉದ್ಘಾಟಿಸಲಿದ್ದಾರೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಅರುಣಾ, ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವ ಸುಧಾಕರ್, ಎಂ.ಟಿ.ಬಿ ನಾಗರಾಜ್, ಮುನಿರತ್ನ ಸೇರಿದಂತೆ ಹಲವು ಸಚಿವರು,ಹಿರಿಯ ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಿದ್ದಾರೆ.

 

ನಾಳೆ ನಡೆಯಲಿರುವ ಮೊದಲ ಜನಸ್ಪಂದನ ಸಮಾವೇಶದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಪಾಲ್ಗೊಳ್ಳುತ್ತಿದ್ದಾರೆ. ಮುಂದಿನ ಜನಸ್ಪಂದನ ಸಮಾವೇಶದಲ್ಲಿ ಕೇಂದ್ರದ ಹಿರಿಯ ನಾಯಕರು ಭಾಗವಹಿಸುವ ಸಾಧ್ಯತೆ ಇದೆ.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ