Breaking News

ಜನರ ಕಷ್ಟಕ್ಕೆ ಸ್ಪಂದಿಸುವುದು ಜನಸ್ಪಂದನ, ಕಾರ್ಯಕ್ರಮ ಮಾಡುವುದಲ್ಲ: ಸಿದ್ದರಾಮಯ್ಯ ಟೀಕೆ

Spread the love

ಬಾಗಲಕೋಟೆ, ಸೆಪ್ಟೆಂಬರ್ 10: ಜನಸ್ಪಂದನ ಅಂದರೆ ಜನರ ಕಷ್ಟ ಸುಖಗಳಿಗೆ ಸ್ಪಂದಿಸಬೇಕು, ರಾಜ್ಯ ಸರಕಾರ ಜನರ ಕಷ್ಟ ಸುಖಗಳಿಗೆ ನೆರವಾಗುತ್ತಿದ್ದಾರಾ? ಮಳೆ ಬಂದು ಹಲವು ಕಡೆ ಪ್ರವಾಹ ಉಂಟಾಗಿದೆ. ಬೆಂಗಳೂರು ಸೇರಿ ಹಲವು ಜಿಲ್ಲೆಗಳು ಹಾಳಾಗಿವೆ, ಮನೆಗಳು ಕುಸಿದಿವೆ, ರೈತರ ಜಮೀನು ಹಾಳಾಗಿವೆ ಅವರಿಗೆ ಪರಿಹಾರ ಕೊಡದೇ ಯಾವ ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದು ಬಿಜೆಪಿ ಸರಕಾರವನ್ನು ತರಾಟೆಗೆ ತೆಗೆದುಕೊಂಡರು.

 

ಜಿಲ್ಲೆಯಲ್ಲಿ ಪ್ರವಾಹದ ಸಮೀಕ್ಷೆಗೆ ಆಗಮಿಸಿದ್ದ ಮಾಜಿ ಸಿಎಂ ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. “ಜನಸ್ಪಂದನ ಅಂದರೆ ಏನು? ಜನರ ಕಷ್ಟ ಸುಖಗಳಿಗೆ ಆಗೋದು ಈ ಸರಕಾರದಿಂದ ಆಗಿದೆಯಾ? ಮಳೆ ಪ್ರವಾಹ ಬಂದು ಬೆಂಗಳೂರು ಸೇರಿ ಎಲ್ಲಾ ಕಡೆ ಹಾಳಾಗಿದೆ. ಇದಕ್ಕೆಲ್ಲಾ ಇಷ್ಟು ದಿನವಾದರೂ ಪರಿಹಾರ ಕೊಟ್ಟಿದ್ದಾರಾ? ಬೆಳೆ ಕಳೆದುಕೊಂಡ ರೈತರಿಗೆ ಬೆಳೆ ಪರಿಹಾರ ಕೊಟ್ಟಿದಾರಾ?, ಮನೆ ಕಳೆದುಕೊಂಡವರಿಗೆ ಪರಿಹಾರ ಕೊಟ್ಟಿದ್ದಾರೆಯೇ?. ಹಲವಾರು ರಸ್ತೆ ಹಾಳಾಗಿವೆ, ಅವುಗಳನ್ನು ಸರಿ ಮಾಡಿದ್ದಾರಾ? ಇಷ್ಟೆಲ್ಲಾ ಇರುವಾಗ ಇದು ಜನಸ್ಪಂದನ ಹೇಗಾಗುತ್ತದೆ? ಜನಸ್ಪಂದನ ಅಂದರೆ ಜನರ ಕಷ್ಟ ಸುಖಗಳಿಗೆ ಸ್ಪಂದಿಸಬೇಕು ಎಂದು ಕಿಡಿ ಕಾರಿದರು.


Spread the love

About Laxminews 24x7

Check Also

ಚಾಮುಂಡೇಶ್ವರಿ ಸಂಜೀವಿನಿ ಮಹಿಳಾ ಸಂಘಟನೆಯ ಕಾರ್ಯಕ್ಕೆ ಒಲಿದು ಬಂತು ರಾಷ್ಟ್ರಮಟ್ಟದ ಪ್ರಶಸ್ತಿ

Spread the love ಬಾಗಲಕೋಟೆ: ಮಹಿಳೆಯರು ಮನಸ್ಸು ಮಾಡಿದರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಮಹಿಳಾ ಸಂಘಟನೆಯೊಂದು ಸಾಕ್ಷಿಯಾಗಿದೆ. ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ