Breaking News

ನಾಳೆಯಿಂದ ವಿಧಾನಮಂಡಲ ಅಧಿವೇಶನ;

Spread the love

ಬೆಂಗಳೂರು: ರಾಜ್ಯ ವಿಧಾನಮಂಡಲದ ಮಳೆಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗಲಿದ್ದು, ಪಿಎಸ್‌ಐ ನೇಮಕಾತಿ ಹಗರಣ, 40 ಪರ್ಸೆಂಟ್‌ ಕಮಿಷನ್‌, ಮಳೆಯಿಂದ ಬೆಂಗಳೂರು ಮುಳುಗಿದ ವಿಚಾರಗಳು ಪ್ರತಿಧ್ವನಿಸುವ ಸಾಧ್ಯತೆಯಿದೆ.

ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದ್ದು ಹಲವು ವಿಧೇಯಕಗಳ ಮಂಡನೆಯಾಗಲಿದೆ.

ಪ್ರವಾಹ ಪರಿಹಾರ, ಮಳೆ ಅನಾಹುತ, ಪಿಎಸ್‌ಐ ಸೇರಿದಂತೆ ಇತರೆ ನೇಮಕಾತಿ ಅಕ್ರಮ ಆರೋಪಗಳ ಬಗ್ಗೆ ಪ್ರಸ್ತಾಪಿಸಿ ಆಡಳಿತಾರೂಢ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷ ಕಾಂಗ್ರೆಸ್‌ ಕಾರ್ಯತಂತ್ರ ರೂಪಿಸಿದೆ. ಇನ್ನು, ಜನಸ್ಪಂದನ ಸಮಾವೇಶದ ಹುಮ್ಮಸ್ಸಿನಲ್ಲಿರುವ ಬಿಜೆಪಿ ಕಾಂಗ್ರೆಸ್‌ಗೆ ಅಧಿವೇಶನದಲ್ಲೇ ತಿರುಗೇಟು ನೀಡಲು ಪ್ರತಿತಂತ್ರದೊಂದಿಗೆ ಸಜ್ಜಾಗಿದೆ.

ಈ ನಡುವೆ ಜೆಡಿಎಸ್‌ ಸಹ ಆಡಳಿತ ಪಕ್ಷದ ವೈಫ‌ಲ್ಯ ಪ್ರಸ್ತಾಪಿಸಲು ಸಿದ್ಧತೆ ನಡೆಸಿದ್ದು ಬೆಂಗಳೂರು-ಮೈಸೂರು ಹೈವೇ ಅವಾಂತರ ವಿಚಾರ ಚರ್ಚೆಗೆ ಪಟ್ಟು ಹಿಡಿಯಲು ತೀರ್ಮಾನಿಸಿದೆ.

ರಾಜ್ಯದಲ್ಲಿ ಕಳೆದ 16 ವರ್ಷಗಳಲ್ಲಿ 11 ವರ್ಷ ಬಿಜೆಪಿಯೇ ಅಧಿಕಾರ ನಡೆಸಿದ್ದು, ಎಲ್ಲ ಕಾಲದ ಹಗರಣಗಳೂ ಸೇರಿಸಿ ತನಿಖೆ ನಡೆಸಲಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಹೀಗಾಗಿ, ಅಧಿವೇಶನದಲ್ಲಿ ಕಾಂಗ್ರೆಸ್‌ – ಬಿಜೆಪಿ ನಡುವೆ ಜಟಾಪಟಿ ನಡೆಯುವ ಸಾಧ್ಯತೆಗಳಿವೆ.


Spread the love

About Laxminews 24x7

Check Also

ಯಾವುದೇ ದೂರದೃಷ್ಟಿ ಇಲ್ಲದ ನೀರಸ ಆಯವ್ಯಯ ಪತ್ರ ಇದು- ಬಿವೈವಿ

Spread the love ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಬಜೆಟ್ ಮೂಲಕ ರಾಜ್ಯದ ಜನತೆಗೆ ನಿರಾಶೆ ಉಂಟು ಮಾಡಿದ್ದಾರೆ. ಯಾವುದೇ ದೂರದೃಷ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ