Breaking News

ಹವಾಮಾನ ವರದಿ; ಕರ್ನಾಟಕ ಕರಾವಳಿಗೆ 4 ದಿನ ಯೆಲ್ಲೋ ಅಲರ್ಟ್

Spread the love

ಬೆಂಗಳೂರು, ಸೆಪ್ಟೆಂಬರ್ 11: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿಮಳೆಮುಂದುವರೆಯಲಿದೆ. ಕರಾವಳಿ ಜಿಲ್ಲೆಗಳಿಗೆ 4 ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಭಾನುವಾರ 10 ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನ ಮಳೆ ಮುಂದುವರೆಯಲಿದೆ. ಭಾರತೀಯ ಹವಾಮಾನ ಇಲಾಖೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

 

ಭಾನುವಾರ ಮಳೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಬೆಳವಾವಿ, ಬೀದರ್, ರಾಯಚೂರು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ.

 

ಬೆಂಗಳೂರಿನಲ್ಲಿಯೂ ಮಳೆ ಕಳೆದ ವಾರ ಬೆಂಗಳೂರು ನಗರದಲ್ಲಿ ಸುರಿದ ಮಳೆ ಅವಾಂತರ ಸೃಷ್ಟಿ ಮಾಡಿತ್ತು. ಆದರೆ ಕಳೆದ ಮೂರು ದಿನಗಳಿಂದ ಮಳೆ ಅಬ್ಬರ ಕಡಿಮೆಯಾಗಿದೆ. ಆದರೆ ಮೋಡ ಕವಿದ ವಾತಾವರಣವಿದೆ, ಆಗಾಗ ತುಂತುರು ಮಳೆಯಾಗುತ್ತಿದೆ. ನಗರದ ಉಷ್ಣಾಂಶ ಸದ್ಯ 21 ಡಿಗ್ರಿ ಸೆಲ್ಸಿಯಸ್ ಆಗಿದೆ.

 

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾನಸ, ದಾವಣಗೆರೆ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಭಾನುವಾರ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬೀದರ್ ಮತ್ತು ರಾಯಚೂರು ಜಿಲ್ಲೆಗಳಲ್ಲಿಯೂ ಭಾನುವಾರ ಮಳೆ ಮುನ್ಸೂಚನೆ ಕೊಡಲಾಗಿದೆ.

ಕಳೆದ ಶನಿವಾರ, ಭಾನುವಾರ ಮತ್ತು ಸೋಮವಾರ ಬೆಂಗಳೂರು ನಗರದ ಉತ್ತರ ಭಾಗದಲ್ಲಿ ಭಾರೀ ಮಳೆಯಾಗಿತ್ತು. ಮಹದೇವಪುರ, ಸರ್ಜಾಪುರ, ಹೊರ ವರ್ತುಲ ರಸ್ತೆಗಳಲ್ಲಿ ನೀರು ತುಂಬಿತ್ತು. ಹಲವು ಬಡಾವಣೆಗಳು ಜಲಾವೃತವಾಗಿದ್ದವು. ಆದರೆ ನಗರದ ದಕ್ಷಿಣ ಭಾಗದಲ್ಲಿ ಹೆಚ್ಚು ಮಳೆಯಾಗಿರಲಿಲ್ಲ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ