ಹುಕ್ಕೇರಿ ತಾಲೂಕಿನ ಹಿಡಕಲ್ ಜಲಾಶಯದಿಂದ 20 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ ಬಿಡಲಾಗಿದೆ ಎಂದು ತಹಶೀಲ್ದಾರ ಡಾ.ಡಿ.ಎಚ್.ಹೂಗಾರ್ ಅವರು ಮಾಹಿತಿ ನೀಡಿದ್ದಾರೆ.
ರವಿವಾರ ದಿನ ಹುಕ್ಕೇರಿ ತಾಲೂಕಿನ ರಾಜಾ ಲಖಮಗೌಡಾ ಜಲಾಶಯದಿಂದ 20 ಸಾವಿರ ಕ್ಯೂಸೆಕ್ ನೀರು ಹೊರ ಬಿಡಲಾಗಿದೆ ಕಾರಣ ಘಟಪ್ರಭಾ ನದಿ ಪಾತ್ರದ ಜನರು
ತಮ್ಮ ಜಾನುವಾರುಗಳ ಸಮೇತ ಸುರಕ್ಷಿತ ಸ್ಥಳಕ್ಕೆ ಹೋಗಬೇಕು ಎಂದು ಹುಕ್ಕೇರಿ ತಹಶೀಲ್ದಾರ ಡಾ.ದೊಡ್ಡಪ್ಪಾ ಹೂಗಾರ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಈಗಾಗಲೆ ಪ್ರತಿ ಗ್ರಾಮಗಳಲ್ಲಿ ಡಂಗುರ ಸಾರುವ ಮೂಲಕ ಮುನ್ನೆಚ್ಚರಿಕೆ ನೀಡಲಾಗಿದೆ ಎಂದಿದ್ದಾರೆ. ಇನ್ನು ನೀರು ಡ್ಯಾಂನಿಂದ ಹೊರ ಬರುತ್ತಿರುವ ದೃಶ್ಯ ನಯನ ಮನೋಹರವಾಗಿದೆ.
Laxmi News 24×7