Breaking News
Home / ರಾಜಕೀಯ / ಹಾಸನಾಂಬೆಯ ದರ್ಶನಕ್ಕೆ ಮೂಹೂರ್ತ ಫಿಕ್ಸ್, ಅಕ್ಟೋಬರ್ 13ರಿಂದ ದೇವಾಲಯ ಓಪನ್

ಹಾಸನಾಂಬೆಯ ದರ್ಶನಕ್ಕೆ ಮೂಹೂರ್ತ ಫಿಕ್ಸ್, ಅಕ್ಟೋಬರ್ 13ರಿಂದ ದೇವಾಲಯ ಓಪನ್

Spread the love

ಹಾಸನ, ಸೆಪ್ಟೆಂಬರ್‌, 11: ವರ್ಷಕ್ಕೊಮ್ಮೆ ದರ್ಶನ ಭಾಗ್ಯ ಕಲ್ಪಿಸುವ ಹಾಸನಾಂಬೆ ದೇವಾಲಯದ ಗರ್ಭಗುಡಿಯ ಬಾಗಿಲು ಅಕ್ಟೋಬರ್ 13ಕ್ಕೆ ತೆರೆಯಲಿದೆ. ಆದ್ದರಿಂದ ಜಿಲ್ಲಾಡಳಿತ 15 ದಿನದ ಜಾತ್ರಾ ಮಹೋತ್ಸವಕ್ಕೆ ಎಲ್ಲಾ ರೀತಿಯ ತಯಾರಿಯನ್ನು ಮಾಡಿಕೊಳ್ಳುತ್ತಿದೆ. ಮಹಾಮಾರಿ ಕೊರೊನಾ ನಂತರ ಇದೀಗ ಅದ್ಧೂರಿಯಾಗಿ ಜಾತ್ರಾ ಮಹೋತ್ಸವವನ್ನು ಆಚರಣೆ ಮಾಡುವುದಕ್ಕೆ ಜಿಲ್ಲಾಡಳಿತ ಯೋಜನೆ ರೂಪಿಸಿದೆ.

ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ನಿರೀಕ್ಷೆಯಿದೆ. ಆದ್ದರಿಂದ ಈಗಾಗಲೇ ಶಾಸಕರ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಿಎಂ ಸೇರಿದಂತೆ ರಾಜ್ಯದ ಎಲ್ಲಾ ಗಣ್ಯರನ್ನು ಆಹ್ವಾನಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಹಾಸನಾಂಬ ದೇವಾಲಯದ ಬಾಗಿಲು ಅಕ್ಟೋಬರ್ 13ರಿಂದ ತೆರೆಯಲಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಅಧಿದೇವತೆಯ ದರ್ಶನವನ್ನು ಭಕ್ತರು ಪಡೆಯಬಹುದಾಗಿದೆ. ಒಟ್ಟು 15 ದಿನಗಳ ಕಾಲ ದೇವಾಲಯ ತೆರೆಯಲಿದೆ. ಆಶ್ವಿಜ ಮಾಸದ ಶುಕ್ಲ ಪಕ್ಷದ ಮೊದಲ ಗುರುವಾರದಂದು ಹಾಸನಾಂಬೆಯ ಬಾಗಿಲು ತೆರೆಯಲಿದ್ದು, ಬಲಿಪಾಡ್ಯಮಿಯ ಮಾರನೇಯ ದಿನ ಶಾಸ್ತ್ರೋಕ್ತವಾಗಿ ಗರ್ಭಗುಡಿಗೆ ಬಾಗಿಲು ಹಾಕಲಾಗುತ್ತದೆ. ಈ ವೇಳೆ ಸ್ಥಳೀಯ ಜನಪ್ರತಿನಿಧಿಗಳು ಸೇರಿದಂತೆ ಜಿಲ್ಲಾಧಿಕಾರಿಗಳು ಬಾಗಿಲು ತೆರೆಯುವ ಮತ್ತು ಮುಚ್ಚುವ ವೇಳೆ ಉಪಸ್ಥಿತರಿರುತ್ತಾರೆ. ಕಳೆದ ಎರಡು ವರ್ಷ ಕೊರೊನಾ ಹಿನ್ನೆಲೆ ಭಕ್ತರಿಗೆ ಹಲವು ನಿಬಂಧನೆಗಳನ್ನು ಹಾಕಲಾಗಿತ್ತು. ಈ ಬಾರಿ ಅದ್ಧೂರಿಯಾಗಿ ಹಾಸನಾಂಬೆ ದೇವಿಯ ಜಾತ್ರಾ ಮಹೋತ್ಸವ ನಡೆಯಲಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ