ಬೆಳಗಾವಿ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಕಾರ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಗಂಗವ್ವ ರಾಮಣ್ಣ ಮೂಲಿಮನಿ (55) ಮೃತ ಮಹಿಳೆ. ಕಳೆದ ಎರಡು ದಿನಗಳಿಂದ ಬೆಳಗಾವಿ ನಗರ ಸೇರಿದಂತೆ ವಿವಿಧ ಕಡೆ ವರುಣನ ಆರ್ಭಟ ಜೋರಾಗಿಯೇ ಇದೆ. ಹೂಲಿಕಟ್ಟಿ ಗ್ರಾಮದಲ್ಲಿಯೂ ಸಹ ಮಳೆ ಸಾಕಷ್ಟು ಹಾನಿ ಮಾಡಿದೆ.
ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಹೂಲಿಕಟ್ಟಿ ಗ್ರಾಮದ ಮನೆಯಲ್ಲಿ ಮಲಗಿದ್ದ ಗಂಗವ್ವ ರಾಮಣ್ಣ ಮೂಲಿಮನಿ ಅವರ ಮೇಲೆ ಮನೆಯ ಗೋಡೆ ಕುಸಿದು ತೀವ್ರ ಗಾಯಗೊಂಡಿದ್ದರು. ಅವರನ್ನು ತಕ್ಷಣವೇ ಸ್ಥಳೀಯರ ನೆರವು ಪಡೆದು ಆಸ್ಪತ್ರೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಗ್ರಾಮಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸವದತ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Laxmi News 24×7