Breaking News

ಇಂದು ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ: ಜೈಲಾ ಅಥವಾ ಆಸ್ಪತ್ರೆ ಇಂದು ನಿರ್ಧಾರ!

Spread the love

ಚಿತ್ರದುರ್ಗ: ಪೋಕ್ಸೋ ಕೇಸ್​ನಲ್ಲಿ ಮುರುಘಾಶ್ರೀಗಳು ಜೈಲು ಸೇರಿದ್ದು, ಜಿಲ್ಲೆಯ 2ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್​​ನಲ್ಲಿ ಇಂದು ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ಆ ಬಳಿಕ ಮುರುಘಾಶ್ರೀಗೆ ಬೇಲಾ, ಜೈಲಾ, ಆಸ್ಪತ್ರೆನಾ? ಇಂದು ನಿರ್ಧಾರವಾಗಲಿದೆ. ಸೆ.14ರವರೆಗೆ ಮುರುಘಾಶ್ರೀ ನ್ಯಾಯಾಂಗ ಬಂಧನದಲ್ಲಿದ್ದಾರೆ. ಕರೊನರಿ ಎಂಜೋಗ್ರಾಮ ಪರೀಕ್ಷೆ, ಚಿಕಿತ್ಸೆ ಬಗ್ಗೆಯೂ ವಿಚಾರಣೆ ನಡೆಯಲಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಶಿಫ್ಟ್ ಮಾಡಲು ಮುರುಘಾಶ್ರೀ ಪರ ವಕೀಲರು ಮನವಿ ಮಾಡಿದ್ದು, ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಕೋರ್ಟ್ ಸೂಚಿಸಿತ್ತು. ಎಂಜೋಗ್ರಾಮ್ ಚಿಕಿತ್ಸೆಗಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಶಿಫ್ಟ್​​ಗೆ ಮಾಡುವಂತೆ ಮನವಿ ಮಾಡಲಾಗಿದೆ. ಆಸ್ಪತ್ರೆಗೆ ಶಿಫ್ಟ್ ಬಗ್ಗೆಯೂ ಇಂದು ಕೋರ್ಟ್​​ನಲ್ಲಿ ವಿಚಾರಣೆ ನಡೆಯಲಿದೆ. ಮುರುಘಾಶ್ರೀ ಹೆಲ್ತ್ ರಿಪೋರ್ಟ್ ಆಧಾರದ ಮೇಲೆ ಕೋರ್ಟ್ ಸೂಚನೆ ನೀಡಲಿದೆ ಎನ್ನಲಾಗುತ್ತಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ