ಬೆಳಗಾವಿ ಜಿಲ್ಲೆಯಲ್ಲಿ ಖಾಸಗಿ ಸಂಚಾರ ಸಾರಿಗೆ ವಾಹನಗಳಲ್ಲಿ ಪ್ರಯಾಣಿಕರನ್ನು ಕುರಿ ಮಂದೆಯಂತೆ ತುಂಬುವುದರ ವಿರುದ್ಧ ಪೆÇಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.
ಕೆಲ ಖಾಸಗಿ ವಾಹನದವರು ಅನುಮತಿಗಿಂತ ದುಪ್ಪಟ್ಟು ಪ್ರಯಾಣಿಕರನ್ನು ತುಂಬುತ್ತಾರೆ. ಇದರಿಂದ ಅಪಘಾತಗಳು ಸಂಭವಿಸಿ ಜೀವ ಹಾನಿಯಾಗಿರುವ ಸಾಕಷ್ಟು ಉದಾಹರಣೆಗಳು ನಮ್ಮ ಕಣ್ಣ ಮುಂದೆಯೇ ಇವೆ.
ಹೀಗಾಗಿ ಮಂಗಳವಾರ ಪೆÇಲೀಸರು ಅನುಮತಿಗಿಂತ ಹೆಚ್ಚು ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ 45 ವಾಹನಗಳನ್ನು ಹಿಡಿದು 9000 ರೂ. ದಂಡ ವಿಧಿಸಿದ್ದಾರೆ. ಅಲ್ಲದೇ ಅನುಮತಿಗಿಂತ ಹೆಚ್ಚು ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ 43 ವಾಹನಗಳನ್ನು ಹಿಡಿದು 8600 ರೂ. ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಿದ್ದಾರೆ.