Breaking News

ಯಶಸ್ಸು ಗಳಿಸಲು ಸರಳ ಶಿಸ್ತು ಸಾಕು’

Spread the love

ಬೆಳಗಾವಿ: ಯಶಸ್ಸು ಎನ್ನುವುದು ಕೆಲವು ಸರಳ ಶಿಸ್ತುಗಳಿಗಿಂತ ಕೂಡಿರುತ್ತದೆ. ಅದು ಹೆಚ್ಚೇನೂ ಇಲ್ಲ, ಪ್ರತಿದಿನ ಅಭ್ಯಾಸ ಹಾಗೂ ಸತತ ಪ್ರಯತ್ನದ ಫಲವಾಗಿ ಅದನ್ನು ಗಳಿಸಲು ಸಾಧ್ಯವೆಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಎಂಬಿಎ ವಿಭಾಗದ ಅಧ್ಯಕ್ಷ ಪ್ರೊ.ತ್ಯಾಗರಾಜ ಹೇಳಿದರು.

 

ಕೆಎಲ್‍ಇ ಸಂಸ್ಥೆಯ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ 2021-2022ನೇ ಸಾಲಿನ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಕ್ರೀಡಾ- ಸಾಂಸ್ಕೃತಿಕ ಚಟುವಟಿಕೆಗಳ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಂಗಳವಾರ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಯುವಕರು ನಮ್ಮ ದೇಶದ ಶಕ್ತಿ. ರಾಷ್ಟ್ರ ನಿರ್ಮಾಣದ ಜವಾಬ್ದಾರಿ ಅವರ ಮೇಲಿದೆ. ಅವರು ಬುದ್ಧಿವಂತಿಕೆ, ಜ್ಞಾನ ಮತ್ತು ಧೈರ್ಯದ ಗುಣಗಳನ್ನು ಬೆಳೆಸಿಕೊಳ್ಳಬೇಕು. ಕಾನೂನು ಪದವೀಧರರಿಗೆ ಸಾಕಷ್ಟು ಉತ್ತಮ ಅವಕಾಶಗಳಿವೆ. ಅವರು ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು. ಇಂದು ನ್ಯಾಯಾಂಗ ವ್ಯವಸ್ಥೆಯು ಸಾಕಷ್ಟು ವಿಸ್ತರಿಸಿಕೊಂಡಿದೆ. ಯಶಸ್ವಿ ವೃತ್ತಿಪರರಾಗಿ ಹೊರಹೊಮ್ಮಲು ಅಹರ್ನಿಷಿ ಪ್ರಯತ್ನಿಸಬೇಕು. ಎಲ್ಲಕ್ಕೂ ಮುಖ್ಯವಾಗಿ ವಿದ್ಯಾರ್ಥಿಗಳು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಮತ್ತು ಪ್ರಾಮಾಣಿಕತೆ, ನಿಷ್ಠೆ, ಬದ್ಧತೆ, ನಂಬಿಕೆ ಮೇಲೆ ಜೀವನವನ್ನು ರೂಪಿಸಿಕೊಳ್ಳಬೇಕು ಎಂದರು.

ವಕೀಲರಾದವರು ಭಾಷೆ ಮೇಲೆ ಪ್ರಭುತ್ವ ಸಾಧಿಸಬೇಕು. ಬಡವರು ಮತ್ತು ನಿರ್ಗತಿಕರಿಗೆ ಸಹಾಯ ಮಾಡಿ ಸಮಾಜಕ್ಕೆ ಸೇವೆ ಸಲ್ಲಿಸಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.


Spread the love

About Laxminews 24x7

Check Also

ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ

Spread the loveಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ