Breaking News

ಕರ್ನಾಟಕದಲ್ಲಿ ಕನ್ನಡ ಕಡ್ಡಾಯ: ಶೀಘ್ರವೇ ಕಾನೂನು ಜಾರಿ:: ಸಿಎಂ ಬೊಮ್ಮಾಯಿ

Spread the love

ಕನ್ನಡಕ್ಕೆ ನಮ್ಮ ಸರ್ಕಾರ ಹೆಚ್ಚು ಒತ್ತು ನೀಡುತ್ತಿದೆ. ಕನ್ನಡವನ್ನು ಕಡ್ಡಾಯಗೊಳಿಸುವ ಕಾಯ್ದೆ ಜಾರಿಗೆ ಬರಲಿದ್ದು, ಈ ಸಂಬಂಧ ವಿಧೇಯಕವು ಪ್ರಸಕ್ತ ಅಧಿವೇಶನದಲ್ಲೇ ಮಂಡನೆಯಾಗಲಿದೆ. ಇದರಿಂದ ನಾಡು-ನುಡಿಗೆ ಕಾನೂನು ಬದ್ಧ ಸಂರಕ್ಷಣೆ ಸಿಗುವಂತಾಗುತ್ತದೆ ಎಂದು ಸದನದಲ್ಲಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದರು.

ಬುಧವಾರ ವಿಧಾನಸಭೆಯಲ್ಲಿ ಜೆಡಿಎಸ್ ಶಾಸಕರು ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರು ಹಿಂದಿ ದಿವಸ್ ಹೆಸರಿನಲ್ಲಿ ಆ ಭಾμÉಯನ್ನು ಹೇರಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ. ಇದನ್ನು ಖಂಡಿಸಿ ಕನ್ನಡ ಪರ ನಿರ್ಣಯವನ್ನು ಸದನ ಅಂಗೀಕರಿಸುವಂತೆ ಆಗ್ರಹಿಸಿದರು.

ಈ ಹಂತದಲ್ಲಿ ಸರ್ಕಾರದ ನಿಲುವು ಘೋಷಿಸಿದ ಸಿಎಂ ಬೊಮ್ಮಾಯಿ, ಕನ್ನಡ ಭಾμÉ- ನೆಲ- ಜಲ ವಿಷಯದಲ್ಲಿ ಯಾವುದೇ ರಾಜಿ ಇಲ್ಲ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಎಂದು ಪುನರುಚ್ಚರಿಸಿದರು.ಕನ್ನಡ ರಕ್ಷಣೆಗೆ ಸರ್ಕಾರ ಬದ್ಧ :ಕನ್ನಡ ರಕ್ಷಣೆಗೆ ಹಾಗೂ ಬೆಳೆಸುವುದಕ್ಕೆ ಸರ್ಕಾರ ಬದ್ಧವಾಗಿದೆ. ಇದುವರೆಗೆ ಕನ್ನಡ ಭಾμÉಗಾಗಿ ಪ್ರಾಧಿಕಾರ ಇತ್ತು. ಕನ್ನಡವೇ ಕಡ್ಡಾಯ ಎಂಬ ಮಾತುಗಳನ್ನು ಸಾಕಷ್ಟು ಕೇಳಿಯಾಗಿತ್ತು. ಈಗ ನಾವು ಕನ್ನಡ ಭಾμÉಯನ್ನು ರಾಜ್ಯದಲ್ಲಿ ಕಡ್ಡಾಯಗೊಳಿಸಲು ಕಾಯ್ದೆಯನ್ನು ತರುತ್ತಿದ್ದೇವೆ. ಕನ್ನಡಕ್ಕಾಗಿ ಕಾಯ್ದೆ ತರುತ್ತಿರುವುದು ಇದೇ ಮೊದಲು ಎಂದು ಹೇಳಿದರು. ಸಿಎಂ ಬೊಮ್ಮಾಯಿ ಅವರ ಈ ಘೋಷಣೆಯನ್ನು ಇಡೀ ಸದನ ಪಕ್ಷಬೇಧ ಮರೆತು ಮೇಜು ತಟ್ಟಿ ಸ್ವಾಗತಿಸಿದ್ದು ವಿಶೇಷವಾಗಿತ್ತು.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ