Breaking News

ಹೃದಯಾಘಾತದಿಂದ ಯೋಧ ಸಾವು: ಗೋಕಾಕದ ಮೇಲ್ಮಟ್ಟಿಯಲ್ಲಿ ಪಾರ್ಥಿವ ಶರೀರದ ಮೆರವಣಿಗೆ

Spread the love

ಗೋಕಾಕ (ಬೆಳಗಾವಿ ಜಿಲ್ಲೆ): ಹೃದಯಾಘಾತದಿಂದ ಮಂಗಳವಾರ ನಿಧನರಾದ ಯೋಧ ಬಾಳಪ್ಪ ಯಲಿಗಾರ (33) ಅವರ ಮೃತದೇಹವನ್ನು ಬುಧವಾರ ಅವರ ಹುಟ್ಟೂರಾದ ಗೋಕಾಕ ತಾಲ್ಲೂಕಿನ ಮೇಲ್ಮಟ್ಟಿಗೆ ತರಲಾಯಿತು.

ಅಪಾರ ಸಂಖ್ಯೆಯಲ್ಲಿ ಸೇರಿದ ಸುತ್ತಮುತ್ತಲಿನ ಗ್ರಾಮಗಳ ಜನ, ಯೋಧನ ಮೃತದೇಹಕ್ಕೆ ಗೌರವಪೂರ್ಣ ಸ್ವಾಗತ ಕೋರಿದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ.ನಂದಗಾವಿ ಹಾಗೂ ಡಿಎಆರ್ ಎಸ್ಪಿ ವೈ.ಕೆ. ಕಾಶಪ್ಪನವರ ಅವರು ಪುಷ್ಪಗುಚ್ಛ ಸಮರ್ಪಿಸಿ ಗೌರವ ಸಲ್ಲಿಸಿದರು.

ಮಹಾರಾಷ್ಟ್ರದ ಔರಂಗಾಬಾದನಲ್ಲಿ ಮಂಗಳವಾರ ಮಧ್ಯಾಹ್ನ ಕೆಲಸದಲ್ಲಿ ಇದ್ದಾಗಲೇ ಯೋಧನಿಗೆ ಹೃದಯಾಘಾತವಾಯಿತು. ತಕ್ಷಣ ಅವರನ್ನು ಔರಂಗಾಬಾದನ ಮಿಲಿಟರಿ ಆಸ್ಪತ್ರೆಗೆ ಸೇರಿಸಲಾಯಿತು. ಅಷ್ಟೊತ್ತಿಗೆ ಅವರು ಕೊನೆಯುಸಿರೆಳೆದರು.

ಮೃತದೇಹವನ್ನು ಗ್ರಾಮಕ್ಕೆ ತಂದಾಗ ದುಃಖ ಮಡುಗಟ್ಟಿತು. ಯೋಧನ ಕುಟುಂಬದವರು, ಬಂಧುಗಳು, ಸ್ನೇಹಿತರು ಕಣ್ಣೀರಾದರು.

ತೆರೆದ ವಾಹನವನ್ನು ಪುಷ್ಪಗಳಿಗೆ ಅಲಂಕರಿಸಿ, ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಶಾಲೆ ಆವರಣದಲ್ಲಿ ಯೋಧನ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಯಿತು.


Spread the love

About Laxminews 24x7

Check Also

ಸಾವಳಗಿಯಲ್ಲಿ ಶ್ರೀ ಶಿವಲಿಂಗೇಶ್ವರ ಜಾತ್ರಾ ಮಹೋತ್ಸವ ಅದ್ದೂರಿ – ಅಡ್ಡ ಪಲ್ಲಕ್ಕಿ ಉತ್ಸವಕ್ಕೆ ಭಕ್ತರ ಅಪಾರ ಸ್ಪಂದನೆ

Spread the loveಗೋಕಾಕ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಶ್ರೀ ಶಿವಲಿಂಗೇಶ್ವರ ಜಾತ್ರಾ ಮಹೋತ್ಸವ ಹಾಗೂ ಅಡ್ಡ ಪಲ್ಲಕ್ಕಿ ಉತ್ಸವದಲ್ಲಿ ಶೂನ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ