Breaking News

ಬಸ್​- ಲಾರಿ ಡಿಕ್ಕಿ: 50ಕ್ಕೂ ಹೆಚ್ಚು ಪ್ರಯಾಣಿಕರ ಜೀವ ಉಳಿಸಿತು ಚಾಲಕನ ಸಮಯ ಪ್ರಜ್ಞೆ

Spread the love

ರಾಯಚೂರು: ಸಾರಿಗೆ ಬಸ್ ಹಾಗೂ ಲಾರಿ ನಡುವೆ ಅಪಘಾತ ನಡೆದಿದ್ದು, ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಸ್ವಲ್ಪದಲ್ಲಿಯೇ ಭಾರಿ ಅನಾಹುತವೊಂದು ತಪ್ಪಿದೆ.

ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ತಿಂಥಣಿ ಸೇತುವೆ ಬಳಿ ಘಟನೆ ಸಂಭವಿಸಿದೆ.

ಅಪಘಾತದ ರಭಸಕ್ಕೆ ಪಲ್ಟಿಯಾಗಿ ಲಾರಿ ಕಂದಕಕ್ಕೆ ಉರುಳಿದೆ. ಬಸ್​ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಅದೃಷ್ಟವಶಾತ್ ಬಸ್​ನಲ್ಲಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಸ್ತೆಗೆ ಅಡ್ಡಲಾಗಿ ಸಾರಿಗೆ ಬಸ್ ನಿಂತ ಹಿನ್ನೆಲೆಯಲ್ಲಿ ಜೇವರ್ಗಿ-ಚಾಮರಾಜನಗರ ಹೆದ್ದಾರಿ ಬಂದ್ ಮಾಡಲಾಗಿದೆ. ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ


Spread the love

About Laxminews 24x7

Check Also

ಗೋಮಾಳದಲ್ಲಿ ಅವೈಜ್ಞಾನಿಕ ಸರ್ಕಾರಿ ಕಟ್ಟಡ ನಿರ್ಮಾಣಕ್ಕೆ ಯತ್ನ: ವಿರೋಧಿಸಿ ತಹಶಿಲ್ದಾರ್ ಕಚೇರಿಗೆ ಕುರಿ ನುಗ್ಗಿಸಿ ಪ್ರತಿಭಟನೆ

Spread the loveದಾವಣಗೆರೆ: ಗೋಮಾಳ‌ ಜಾಗವನ್ನು ಸರ್ಕಾರಿ ಕಟ್ಟಡ ನಿರ್ಮಾಣ ಮಾಡಲು ಮಂಜೂರು ಮಾಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ದಾವಣಗೆರೆ ಜಿಲ್ಲೆಯ ನ್ಯಾಮತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ