Breaking News

ಮಿಸ್ ಧಾರವಾಡ ವರ್ಷಿಣಿ ಈಗ ಮಿಸ್ ಊರ್ವಶಿ

Spread the love

ಧಾರವಾಡ: ವಿದ್ಯಾಕಾಶಿಯ ಸುಂದರಿ ಮಿಸ್ ಧಾರವಾಡ (Dharwad) ವರ್ಷಿಣಿ ರಾಮಡಗಿ(Varshini Ramadagi) ಈಗ ಮಿಸ್ ಊರ್ವಶಿ(Miss Urvashi) ಎನ್ನುವ ಅತ್ಯಾಕರ್ಷಕ ಕಿರೀಟ ಧರಿಸುವುದರೊಂದಿಗೆ ದೇಶದ ನವ ಸುಂದರಿಯ ಪಟ್ಟ ಅಲಂಕರಿದ್ದಾರೆ.

ಈಗಷ್ಟೇ 20 ಈ ನವತರುಣಿಯಾಗಿರುವ ವರ್ಷಿಣಿ(Varshini), ಧಾರವಾಡದ ಕೆಸಿಡಿ ಕಾಲೇಜ್‍ನಲ್ಲಿ ಟ್ರಾವೆಲ್ ಆ್ಯಂಡ್ ಟೂರಿಸಂ ಕೋರ್ಸ್‍ನಲ್ಲಿ(Travel and Tourism Course) 2ನೇ ವರ್ಷದಲ್ಲಿ ಓದುತ್ತಿದ್ದಾರೆ. ಇತ್ತೀಚೆಗೆ ಜೈಪುರದಲ್ಲಿ(Jaipura) ಮಿಸ್ ಇಂಟರ್ ಕ್ವಾಂಟಿನೇಂಟಲ್ ಹಾಗೂ ಎಲೀಟ್ ಫೌಂಡೇಶನ್ ಆಯೋಜಿಸಿದ್ದ ರಾಷ್ಟ್ರಮಟ್ಟದ ಸೌಂದರ್ಯ ಸ್ಪರ್ಧೆಯಲ್ಲಿ (Beauty Pageants) ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಅಲ್ಲದೇ ಅಲ್ಲಿ ವಿನ್ನರ್ ಆಗಿ ಹೊರಹೊಮ್ಮುವ ಮೂಲಕ ಮಿಸ್ ಊರ್ವಶಿ ಕಿರೀಟವನ್ನು(Crown) ಮುಡಿಗೇರಿಸಿಕೊಂಡಿದ್ದಾರೆ.

ಇತ್ತೀಚೆಗೆ ಕರ್ನಾಟಕದಲ್ಲಿ ಆಡಿಷನ್(Audition) ನಡೆಸಿ ಕರ್ನಾಟಕದಿಂದ ವರ್ಷಿಣಿ ಈ ಸೌಂದರ್ಯ ಸ್ಪರ್ಧೆಗೆ ಆಯ್ಕೆಯಾಗಿದ್ದರು. ಒಟ್ಟು 25 ರಾಜ್ಯಗಳಿಂದ 18 ರಿಂದ 25 ವರ್ಷದೊಳಗಿನ 25 ಮಾಡೆಲ್‍ಗಳು(Models) ಈ ಸ್ಪರ್ಧೆಯಲ್ಲಿ ಸ್ಪರ್ಧಿಸಿದ್ದರು. ಈ ಮೂಲಕ ಮಿಸ್ ಊರ್ವಶಿ ಕಿರೀಟವನ್ನು ಕರ್ನಾಟಕಕ್ಕೆ(Karnataka) ತಂದು ಕೊಡುವುದರ ಜೊತೆಗೆ ಮುಂದೆ ನಡೆಯುವ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ(International Computation) ಭಾರತವನ್ನು ಪ್ರತಿನಿಧಿಸಲಿದ್ದಾರೆ.


Spread the love

About Laxminews 24x7

Check Also

2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ*

Spread the love 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಕ್ಕಬಳ್ಳಾಪುರ(ಶಿಡ್ಲಘಟ್ಟ), …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ