ಬೆಳಗಾವಿ: ಪತಿ ಸಾವಿನ ಸುದ್ದಿ ಕೇಳಿ ಪತ್ನಿಯೂ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಯರಗಟ್ಟಿ ತಾಲ್ಲೂಕಿನ ತಲ್ಲೂರ ಗ್ರಾಮದಲ್ಲಿ ನಡೆದಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಬಾಬಣ್ಣ ಅಣ್ಣಿಗೇರಿ(76) ಬುಧವಾರ ತಡರಾತ್ರಿ ಮೃತಪಟ್ಟರು.
ಈ ವಿಷಯ ಕೇಳಿದ ಪತ್ನಿ ಶಿವಬಸವ್ವ(70) ಕೆಲಹೊತ್ತಿನಲ್ಲೇ ಹೃದಯಾಘಾತಕ್ಕೀಡಾಗಿ ನಿಧನರಾದರು.
ಏಕಕಾಲಕ್ಕೆ ವೃದ್ಧ ದಂಪತಿ ಅಗಲಿದ್ದಕ್ಕೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಇಂದು ಮಧ್ಯಾಹ್ನ 12 ಗಂಟೆಗೆ ಇಬ್ಬರ ಅಂತ್ಯಕ್ರಿಯೆಯನ್ನು ಮಾಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.