Breaking News

ಗೋಕಾಕ ನಲ್ಲಿ ರೇಬಿಸ್ ದಿನ ಆಚರಣೆ

Spread the love

ಗೋಕಾಕ  : ಗೋಕಾಕ ತಾಲೂಕಿನಲ್ಲಿ ವಿಶ್ವ ರೇಬೀಸ್ ದಿನಾಚರಣೆ ಅಂಗವಾಗಿ ಮಿಷನ್ ರೇಬೀಸ್ ಕಾರ್ಯಕ್ರಮವನ್ನು ದಿನಾಂಕ:-15-09-2022 ರಂದು ಪಶು ಆಸ್ಪತ್ರೆ ಗೋಕಾಕನಲ್ಲಿ ಉಚಿತವಾಗಿ ಶ್ವಾನಗಳಿಗೆ ರೇಬೀಸ್ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,

 

ನಗರ ಸಭೆ ಅಧ್ಯಕ್ಷರಾದ ಶ್ರೀ ಜಯಾನಂದ ಹುಣಶ್ಯಾಳಿ ಇವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಹಾಯಕ ನಿರ್ದೇಶಕರಾದ ಡಾ:ಮೋಹನ.ವಿ.ಕಮತ ರವರು ಕಾರ್ಯಕ್ರಮದ ಕುರಿತು ಮಾತನಾಡಿ ರೇಬೀಸ್ ರೋಗ ಪ್ರಾಣಿಜನ್ಯ ರೋಗವಾಗಿದ್ದು ಜಾನುವಾರುಗಳಿಂದ ಜಾನುವಾರುಗಳಿಗೆ, ಜಾನುವಾರುಗಳಿಂದ ಮಾನವರಿಗೆ ಹರಡುವ ರೋಗವಾಗಿದ್ದು, ಇದಕ್ಕೆ ಚಿಕಿತ್ಸೆ ಇರುವುದಿಲ್ಲ

 

ಕಾರಣ ರೋಗ ನಿಯಂತ್ರಣಕ್ಕಾಗಿ ಎಲ್ಲರೂ ತಮ್ಮ ತಮ್ಮ ಶ್ವಾನಗಳಿಗೆ ಲಸಿಕೆ ಹಾಕಿಸಬೇಕೆಂದು ತಿಳಿಸಿದರು. ಸದರಿ ಕಾರ್ಯಕ್ರಮದಲ್ಲಿ 25 ಶ್ವಾನಗಳಿಗೆ ಉಚಿತವಾಗಿ ರೇಬೀಸ್ ಲಸಿಕೆಯನ್ನು ಹಾಕಲಾಯಿತು. ಕಾರ್ಯಕ್ರಮದಲ್ಲಿ ನಗರ ಸಭೆ ಅಧ್ಯಕ್ಷರಾದ ಶ್ರೀ ಜಯಾನಂದ ಹುಣಶ್ಯಾಳಿ, ನಗರ ಸಭೆ ಆಯುಕ್ತರಾದ ಶ್ರೀ ಶಿವಾನಂದ ಹಿರೇಮಠ ಹಾಗೂ ಸಹಾಯಕ ನಿರ್ದೇಶಕರಾದ ಡಾ:ಮೋಹನ.ವಿ.ಕಮತ, ಡಾ:ಶಶಿಕಾಂತ ಕೌಜಲಗಿ ಹಾಗೂ ಎಲ್ಲ ಸಿಬ್ಬಂದಿಯವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ

Spread the loveಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ