Breaking News

ಸಿಂಧುತ್ವ ಪ್ರಮಾಣಪತ್ರಕ್ಕೆ ಲಂಚ: ಉಪ ತಹಶೀಲ್ದಾರ್‌ ಬಂಧನ

Spread the love

ಬೆಂಗಳೂರು : ಜಮೀನಿನ ಒಡೆತನಕ್ಕೆ ಸಂಬಂಧಿಸಿದ ಸಿಂಧುತ್ವ ಪ್ರಮಾಣ ಪತ್ರ ನೀಡಲು ₹45,000 ಲಂಚ ಪಡೆಯುತ್ತಿದ್ದ ಬೆಂಗಳೂರು ಉತ್ತರ ತಾಲ್ಲೂಕು ಕಚೇರಿಯ ಉಪ ತಹಶೀಲ್ದಾರ್‌ ಪಿ.ಎಂ. ಶ್ರೀಕಾಂತ್‌ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಬಂಧಿಸಿದ್ದಾರೆ.

 

ರಘುಶಂಕರ್‌ ಎಬುವವರಯ ಯಶವಂತಪುರ ಹೋಬಳಿ ಕೊಡಿಗೆಹಳ್ಳಿಯಲ್ಲಿ ಹೊಂದಿರುವ ಜಮೀನನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಸ್ವಾಧೀನಪಡಿಸಿಕೊಂಡಿತ್ತು. ಈ ಜಮೀನಿನ ಬಾಬ್ತು ಪರಿಹಾರದ ಮೊತ್ತ ಪಡೆಯಲು ಜಮೀನು ಮಾಲೀಕರು ಸಿಂಧುತ್ವ ಪ್ರಮಾಣಪತ್ರ ಸಲ್ಲಿಸಬೇಕಿತ್ತು. ಇದಕ್ಕಾಗಿ ಸಿಂಧುತ್ವ ಪ್ರಮಾಣಪತ್ರ ಕೋರಿ ಅರ್ಜಿ ಸಲ್ಲಿಸಿದ್ದರು.

ಶ್ರೀಕಾಂತ್‌ ಅವರನ್ನು ಭೇಟಿಮಾಡಿದ್ದ ರಘುಶಂಕರ್‌, ಸಿಂಧುತ್ವ ಪ್ರಮಾಣಪತ್ರ ನೀಡುವಂತೆ ಮನವಿ ಮಾಡಿದ್ದರು. ₹ 13 ಲಕ್ಷ ಲಂಚ ನೀಡುವಂತೆ ಅಧಿಕಾರಿ ಆರಂಭದಲ್ಲಿ ಬೇಡಿಕೆ ಇಟ್ಟಿದ್ದರು. ನಂತರ ಇಬ್ಬರ ನಡುವೆ ಮಾತುಕತೆ ನಡೆದಿದ್ದು, ₹ 45,000 ನೀಡಿದರೆ ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ ಆರೋಪಿ ಅಧಿಕಾರಿ ಹೇಳಿದ್ದರು. ಈ ಕುರಿತು ಅರ್ಜಿದಾರರು ಲೋಕಾಯುಕ್ತದ ಬೆಂಗಳೂರು ನಗರ ಪೊಲೀಸ್‌ ವಿಭಾಗಕ್ಕೆ ದೂರು ಸಲ್ಲಿಸಿದ್ದರು.

ಆರೋಪಿಯ ಸೂಚನೆಯಂತೆ ಉಪ ತಹಶೀಲ್ದಾರ್‌ ಕಚೇರಿಗೆ ಗುರುವಾರ ತೆರಳಿದ ದೂರುದಾರರು ಲಂಚದ ಹಣ ತಲುಪಿಸಿದರು. ತಕ್ಷಣ ದಾಳಿಮಾಡಿದ ಲೋಕಾಯುಕ್ತ ಪೊಲೀಸರು ಶ್ರೀಕಾಂತ್‌ ಅವರನ್ನು ಬಂಧಿಸಿದರು.


Spread the love

About Laxminews 24x7

Check Also

2019ನೇ ಸಾಲಿನ ಡಾ. ರಾಜ್ ಕುಮಾರ್ ಪ್ರಶಸ್ತಿಗೆ ಉಮಾಶ್ರೀ ಭಾಜನ: ಪುಟ್ಟಣ್ಣ ಕಣಗಾಲ್, ವಿಷ್ಣುವರ್ಧನ್ ಪ್ರಶಸ್ತಿ ಪ್ರಕಟ

Spread the loveಬೆಂಗಳೂರು: 2019ನೇ ಸಾಲಿನ ಡಾ. ರಾಜ್ ಕುಮಾರ್ ಪ್ರಶಸ್ತಿ, ಪುಟ್ಟಣ್ಣ ಕಣಗಾಲ್ ಹಾಗೂ ಡಾ. ವಿಷ್ಣುವರ್ಧನ್ ಪ್ರಶಸ್ತಿ ಸೇರಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ