ಬಳ್ಳಾರಿ: ವಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಾಗಿದ್ದ 8 ವರ್ಷದ ಬಾಲಕ ಬುಧವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಮೃತಪಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ. ಸಿರುಗುಪ್ಪದ ಕೆ.ಮಹೇಶ್ ಹಾಗೂ ಈರಮ್ಮ ದಂಪತಿಯ ಪುತ್ರ ನಿಖಿಲ್ (8) ಮೃತ ಬಾಲಕ.
ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಈತನನ್ನು ಸೆ.11ರಂದು ವಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು. ಬುಧವಾರ ಸರಣಿ ಸಾವು ಪ್ರಕರಣ ಹೊರ ಬೀಳುತ್ತಿದ್ದಂತೆಯೇ ಈ ವಿಚಾರ ಗುರುವಾರ ಸಂಜೆಯ ವೇಳೆಗೆ ಬಹಿರಂಗವಾಗಿದೆ.
“ನನ್ನ ಮಗನನ್ನು ಐಸಿಯುದಲ್ಲಿ ಅಡ್ಮಿಟ್ ಮಾಡಿದ್ದೆವು. ವೆಂಟಿಲೇಟರ್ ಮೇಲಿದ್ದ. ಆದರೆ ನಿನ್ನೆ ಬೆಳಿಗ್ಗೆ ಕರೆಂಟ್ ಹೋದಾಗ ಮಶೀನ್‍ಗಳೆಲ್ಲ ಬಂದ್ ಆದವು. ಯಾಕೆ ಹೀಗೆ ಎಂದು ಅಲ್ಲಿದ್ದ ಸಿಬ್ಬಂದಿಯನ್ನು ಕೇಳಿದೆವು. ಕರೆಂಟ್ ಹೋಗಿದೆ ಎಂದರು. ಕೆಲವೇ ಕ್ಷಣಗಳಲ್ಲಿ ನನ್ನ ಮಗ ಸತ್ತು ಹೋದ” ಎಂದು ತಾಯಿ ಈರಮ್ಮ ಹೇಳಿದರು.
Laxmi News 24×7