Breaking News

ಸಿದ್ಧರಾಮಯ್ಯ ಪ್ರಶ್ನೆಗೆ ತಬ್ಬಿಬ್ಬಾಗಿ ಮುಜುಗರಕ್ಕೊಳಗಾದ ಸಚಿವ ಬಿ.ಸಿ. ಪಾಟೀಲ್

Spread the love

ವಿಧಾನಸಭೆಯಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಮುಜುಗರಕ್ಕೆ ಒಳಗಾಗಿದ್ದಾರೆ. ಬೆಳೆ ಹಾನಿ ಪರಿಹಾರದ ಬಗ್ಗೆ ಮಾಹಿತಿ ನೀಡಲು ಹೋದ ಅವರು ಮುಜುಗರಕ್ಕೆ ಒಳಗಾಗಿದ್ದಾರೆ.

ಬಾದಾಮಿ ಕ್ಷೇತ್ರದಲ್ಲಿ ಬೆಳೆ ಹಾನಿ ಪರಿಹಾರಕ್ಕೆ ಸಂಬಂಧಿಸಿದಂತೆ ಕ್ಷೇತ್ರದ ಶಾಸಕರಾದ ವಿಪಕ್ಷನಾಯಕ ಸಿದ್ದರಾಮಯ್ಯ ಮಾಹಿತಿ ಕೇಳಿದ್ದಾರೆ.

ಮಾಹಿತಿ ಕೊಡಲು ಹೋಗಿ ಕೃಷಿ ಸಚಿವರು ಮುಜುಗರ ಎದುರಿಸಿದ್ದಾರೆ. ಮೊದಲು ನಾಳೆ ಮಾಹಿತಿ ಕೊಡುತ್ತೇನೆ ಎಂದು ಹೇಳಿದ ಬಿ.ಸಿ. ಪಾಟೀಲ್ ಅವರು, ಸ್ವಲ್ಪ ಹೊತ್ತಿನ ನಂತರ ಮಾಹಿತಿ ತಂದು ಸದನಕ್ಕೆ ನೀಡಲು ಮುಂದಾಗಿದ್ದಾರೆ.

ಬಾದಾಮಿಯಲ್ಲಿ 169 ರೈತರಿಗೆ 18.5 ಲಕ್ಷ ರೂ. ಪರಿಹಾರ ಜಮಾ ಮಾಡಲಾಗಿದೆ ಎಂದು ಸಚಿವರು ಹೇಳಿದ್ದು, ಈ ವೇಳೆ ಎಷ್ಟು ಎಕರೆ ಬೆಳೆ ನಷ್ಟವಾಗಿದೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಪ್ರಶ್ನೆಗೆ ಉತ್ತರಿಸಲು ಬಿ.ಸಿ. ಪಾಟೀಲ್ ತಬ್ಬಿಬ್ಬಾಗಿದ್ದಾರೆ. ನಾಳೆ ಸರಿಯಾದ ಮಾಹಿತಿ ತಂದು ಕೊಡಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಿಡ್ರಿ ಸುಮ್ಮನೆ ನಾಳೆ ಹೇಳುವಿರಂತೆ ಎಂದು ಸ್ಪೀಕರ್ ಕಾಗೇರಿ ಸಚಿವರಿಗೆ ಹೇಳಿದ್ದು, ಇಲ್ಲದೆ ಇರುವುದನ್ನು ಮೈಮೇಲೆ ಎಳೆದುಕೊಳ್ಳುತ್ತೀರಿ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ