ಮೈಸೂರು, ಸೆ.16: ಶಿಕ್ಷಣ, ಉದ್ಯೋಗ ಮತ್ತು ರಾಜಕೀಯದಲ್ಲಿ ಕಡುಬಡವರಿಗೆ ಸಿಗಬೇಕಿದ್ದ ಮೀಸಲಾತಿ ಉಳ್ಳವರ ಪಾಲಾಗುತ್ತಿದ್ದು ಕೇಂದ್ರ ಸರಕಾರ ಕೂಡಲೇ ಶ್ರೀಮಂತರ ಮೀಸಲಾತಿಯನ್ನು ರದ್ದುಪಡಿಸಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ.
ನಗರದ ಹೋಟೆಲ್ ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತ ಸಮುದಾಯದಲ್ಲಿ ಪ್ರಬಲರೇ ಮೀಸಲಾತಿ ಪ್ರಯೋಜನ ಪಡೆಯುತ್ತಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ನಂತರ ಅವರ ಮಗ ಪ್ರಿಯಾಂಕ್ ಖರ್ಗೆ ಮೀಸಲಾತಿ ಪ್ರಯೋಜನ ಪಡೆಯುತ್ತಿದ್ದಾರೆ. ಹಾಗಾಗಿ ಇಂಥವರಿಗೆ ಮೀಸಲಾತಿಯನ್ನು ನಿಲ್ಲಿಸಬೇಕು ಎಂದು ಹೇಳಿದರು.