ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕೇಳಿ ಬರುತ್ತಿದ್ದ ಬುಲ್ಡೋಜರ್ ಕಾರ್ಯಾಚರಣೆ ಕುರಿತು ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ. ಕೋಮು ಗಲಭೆಗಳಲ್ಲಿ ಪಾಲ್ಗೊಂಡವರ ಅಕ್ರಮ ಆಸ್ತಿ ನೆಲಸಮಗೊಳಿಸುವ ಯಾವುದೇ ಪ್ರಸ್ತಾವನೆ ಇಲ್ಲ ಎಂದಿದ್ದಾರೆ.
ವಿಧಾನ ಪರಿಷತ್ ನಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ರಾಜ್ಯದಲ್ಲಿ ಕೋಮು ಗಲಭೆಗಳ ತಡೆಗೆ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿ ಟಿವಿ ಅಳವಡಿಕೆ, ಗಲಭೆಕೋರರ ಗಡಿಪಾರು ಜೊತೆಗೆ ವಿವಿಧ ಕೋಮುಗಳ ಮುಖಂಡರ ಶಾಂತಿ ಸಭೆಯನ್ನೂ ಸಹ ನಡೆಸಲಾಗುತ್ತಿದೆ ಎಂದರು.
ಇನ್ನು ಕೆಜೆ ಹಳ್ಳಿ ಹಾಗೂ ಡಿಜೆ ಹಳ್ಳಿಯಲ್ಲಿನ ಗಲಭೆಗಳ ಸಂದರ್ಭದಲ್ಲಿ ಸಂಭವಿಸಿದ ಸಾರ್ವಜನಿಕ ಹಾಗೂ ಸರ್ಕಾರಿ ಆಸ್ತಿ ನಷ್ಟದ ಅಂದಾಜು ಮಾಡಲು ಈಗಾಗಲೇ ನಿವೃತ್ತ ನ್ಯಾಯಮೂರ್ತಿ ಹೆಚ್.ಎಸ್. ಕೆಂಪಣ್ಣ ಅವರನ್ನು ಕ್ಲೈಂ ಕಮಿಷನರ್ ಆಗಿ ನೇಮಕ ಮಾಡಲಾಗಿದ್ದು, ವರದಿ ಪರಿಶೀಲಿಸಿದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದರು.
Laxmi News 24×7