ಬೆಂಗಳೂರು: ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಬಿಜೆಪಿ ಸಂಸದ ಪಿ.ಸಿ.
ಗದ್ದಿಗೌಡರ್ ಅವರಿಗೆ ಓಪನ್ ಹಾರ್ಟ್ ಸರ್ಜರಿ ಯಶಸ್ವಿಯಾಗಿದೆ.
ಕಳೆದ ನಾಲ್ಕು ದಿನಗಳ ಹಿಂದೆ ಪಿ.ಸಿ. ಗದ್ದಿಗೌಡರ್ ಆಸ್ಪತ್ರೆಗೆ ದಾಖಲಾಗಿದ್ದರು. ಬಾಗಲಕೋಟೆ ಕ್ಷೇತ್ರದ ಬಿಜೆಪಿ ಸಂಸದರಾದ ಗದ್ದಿಗೌಡರ್ ಹೃದಯದಲ್ಲಿ ಶೇಕಡ 70 ರಷ್ಟು ಬ್ಲಾಕ್ ಆಗಿದ್ದು, ಹೀಗಾಗಿ ಓಪನ್ ಹಾರ್ಟ್ ಸರ್ಜರಿ ಮಾಡಲಾಗಿತ್ತು.
ಗದ್ದಿಗೌಡರ್ ಅವರಿಗೆ ಕರೆ ಮಾಡಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆರೋಗ್ಯ ವಿಚಾರಿಸಿದ್ದಾರೆ. ಬಾಗಲಕೋಟೆ ಶಾಸಕ ವೀರಣ್ಣ ಚರಂತಿಮಠ ಅವರು ಯೋಗಕ್ಷೇಮ ವಿಚಾರಿಸಿದ್ದಾರೆ.
Laxmi News 24×7