Breaking News

ಕೆಲಸ ಮಾಡದವರಿಗೆ ಯಾಕ್ರೀ ಟಿಕೆಟ್ ಕೊಡಬೇಕು, ನನಗೆ ನಂಬರ್ ಬೇಕು, ನಮ್ಮ ಸರ್ಕಾರ ಬರಬೇಕು: ಡಿಕೆಶಿ

Spread the love

ಬೆಂಗಳೂರು: ಸುಮ್ಮನೆ ಶಾಸಕರು ಕ್ಷೇತ್ರದಲ್ಲಿ ಮದುವೆಗೆ ಭಾಗಿಯಾಗುವುದು, ಟೇಪ್ ಕಟ್ ಮಾಡ್ಕೊಂಡು ಇದ್ರೆ ಆಗಲ್ಲ. ಬೂತ್ ಮಟ್ಟಕ್ಕೆ ಹೋಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಸದಾಶಿವನಗರದ ನಿವಾಸದಲ್ಲಿ ಮಾತನಾಡಿದ ಅವರು, ಶಾಸಕರು ಏನೇನು ಮಾಡಬೇಕು ಅಂತ ಸುರ್ಜೆವಾಲಾ ಟಾರ್ಗೆಟ್ ಕೊಟ್ಟಿದ್ದಾರೆ. ಕೆಲಸ ಮಾಡದವರಿಗೆ ಯಾಕ್ರೀ ಟಿಕೆಟ್ ಕೊಡಕ್ಕಾಗತ್ತದೆ?.. ನನಗೆ ನಂಬರ್ ಬೇಕು, ನಮ್ಮ ಸರ್ಕಾರ ರಚನೆಯಾಗಬೇಕು. ಬೂತ್ ಮಟ್ಟಕ್ಕೆ ಹೋಗಿ ಕೆಲಸ ಮಾಡಬೇಕು ಅನ್ನೋದು ನನ್ನ ಕಾನ್ಸೆಪ್ಟ್. ಆ ರೀತಿ ಕೆಲಸ ಮಾಡಿದರೆ ಮಾತ್ರ ಸಂಘಟನೆ ಆಗುತ್ತದೆ ಎಂದು ಡಿಕೆಶಿ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಇಡಿ ವಿಚಾರಣೆಗೆ ಹಾಜರಾಗುತ್ತೇನೆ ಎಂದ ಡಿಕೆಶಿ: ನಾನು ದೆಹಲಿಗೆ ಹೋಗಿ ಇಡಿ ವಿಚಾರಣೆಗೆ ಹಾಜರಾಗ್ತೇನೆ. ಯಾವ ಕಾರಣಕ್ಕೆ ಹೊಸದಾಗಿ ನೋಟಿಸ್ ಕೊಟ್ಟಿದ್ದಾರೋ ಗೊತ್ತಿಲ್ಲ. ಅವರ ಬಳಿ ಎಲ್ಲ ಡಿಟೇಲ್ಸ್ ಇತ್ತು. ಆದರೂ ನೋಟಿಸ್​ ಬಂದಿದೆ ಎಂದರು.ನಾನು ಅಟೆಂಡ್ ಆಗದೇ ಇರಬಹುದಿತ್ತು. ಆದರೆ ಓಡಿ ಹೋದಂತಾಗುತ್ತದೆ. ಹಾಗೆ ಮಾಡುವುದಕ್ಕೆ ನಾನು ತಯಾರಿಲ್ಲ. ಮೈಸೂರಿನಿಂದ ಬಂದ ಬಳಿಕ ದೆಹಲಿಗೆ ಹೋಗ್ತೇನೆ. ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ನೋಟೀಸ್ ಕೊಟ್ಟಿದ್ದರು. ನಾನು ಅದರ ವಿರುದ್ಧ ಕೋರ್ಟ್​ಗೆ ಹೋಗಿದ್ದೆ. ಆದರೆ ಈಗ ಮತ್ತೆ ಯಾಕೆ ಹೊಸ ನೊಟೀಸ್ ಕೊಟ್ಟಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಎಂದರು.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣದ ಮಾಸ್ಟರ್​​ ಮೈಂಡ್ ದಕ್ಷಿಣಕನ್ನಡ ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪ

Spread the love ಬೆಂಗಳೂರು/ದಕ್ಷಿಣ ಕನ್ನಡ: “ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತರದ ಹಿಂದಿನ ಮಾಸ್ಟರ್​ ಮೈಂಡ್​​ ತಮಿಳುನಾಡಿನ ತಿರುವಲ್ಲೂರಿನ ಕಾಂಗ್ರೆಸ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ