Breaking News

2A ಮೀಸಲಾತಿ ವಿಳಂಬ 5 ಸಾವಿರಕ್ಕೂ ಹೆಚ್ಚು ಜನ ಬೊಮ್ಮಾಯಿನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ: ರಮೇಶ್ ಗೌಡ ಪಾಟೀಲ್

Spread the love

  ಅಥಣಿ  :ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ನೀಡುವಂತೆ ಹಲವು ದಶಕಗಳ ಹೋರಾಟ ಇದಾಗಿದೆ, ಆದರೆ ಸರ್ಕಾರಗಳು ಭರವಸೆ ನೀಡುತ್ತಾ ಬಂದಿದೆ, ಇದನ್ನು ಖಂಡಿಸಿ ನಾವು ಬರುವ ದಿನಾಂಕ ಇಪ್ಪತ್ತರಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಅಥಣಿ ತಾಲೂಕು ಪಂಚಮಸಾಲಿ ಸಂಘಟನೆಯ ಅಧ್ಯಕ್ಷರಾದ ರಮೇಶ್ ಗೌಡ ಪಾಟೀಲ್ ಅವರು ಹೇಳಿದರು.

ಅವರು ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಾ, ಪಂಚಮಸಾಲಿ ಸಮಾಜ ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದೆ, ಈ ಸಮಾಜದಲ್ಲಿ ಶೈಕ್ಷಣಿಕವಾಗಿ ಮುಂಬರುವ ದೃಷ್ಟಿಕೋನದಿಂದ ಸರ್ಕಾರಕ್ಕೆ 2ಎ ಮೀಸಲಾತಿಯನ್ನು ದಶಕಗಳಿಂದ ಕೇಳುತ್ತಿದ್ದೇವೆ. ಆದರೆ ಹಲವು ಮುಖ್ಯಮಂತ್ರಿಗಳು ಭರವಸೆಯನ್ನು ಮಾತ್ರ ನೀಡುತ್ತಿದ್ದಾರೆ.

ಇದನ್ನು ನಾವು ಖಂಡಿಸಿ ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನಿವಾಸವನ್ನು ಮುತ್ತಿಗೆ ಹಾಕುತ್ತೇವೆ, ಅಥಣಿ ತಾಲೂಕಿನಿಂದ ಐದು ಸಾವಿರಕ್ಕೂ ಹೆಚ್ಚು ಜನ ತೆರಳುತ್ತಿದ್ದೇವೆ ಹಾಗೂ ಸಮಾಜ ಬಾಂಧವರು ಶಿಗ್ಗಾವಿಗೆ ಬರುವಂತೆ ಕರೆ ನೀಡಿದರು.

ಒಂದು ವೇಳೆ ೨ಎ ಮೀಸಲಾತಿ ಇದೇ ರೀತಿ ವಿಳಂಬ ಧೋರಣೆ ಮುಂದುವರೆಸಿದರೆ. ನವೆಂಬರ್ ತಿಂಗಳಲ್ಲಿ ಬೆಂಗಳೂರಿನಲ್ಲಿ 25 ಲಕ್ಷಕ್ಕೂ ಹೆಚ್ಚು ಸಮಾಜ ಬಾಂಧವರದಿಂದ ಬೃಹತ್ ಪ್ರತಿಭಟನೆ ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು. ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿದರು.


Spread the love

About Laxminews 24x7

Check Also

ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ ಪ್ರತಿಟಭಟನೆ.

Spread the love ಹುಕ್ಕೇರಿ : ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ