Breaking News

ಜಿಲ್ಲೆಯ 9 ತಾಲೂಕುಗಳಲ್ಲಿ ಕೊರೊನಾ ಸೋಂಕು ಇಲ್ಲವಾದ್ದರಿಂದ ಅಲ್ಲಿ ರಿಯಾಯಿತಿ‌‌ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ‌ ಶೆಟ್ಟರ್ ಸರ್ಕಾರಕ್ಕೆ‌ ಮನವಿ ಮಾಡಿದರು.

Spread the love

ಬೆಳಗಾವಿ: ಜಿಲ್ಲೆಯ 9 ತಾಲೂಕುಗಳಲ್ಲಿ ಕೊರೊನಾ ಸೋಂಕು ಇಲ್ಲವಾದ್ದರಿಂದ ಅಲ್ಲಿ ರಿಯಾಯಿತಿ‌‌ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ‌ ಶೆಟ್ಟರ್ ಸರ್ಕಾರಕ್ಕೆ‌ ಮನವಿ ಮಾಡಿದರು.

ಜಿಲ್ಲೆಯ ಜನಪ್ರತಿನಿಧಿಗಳ ಜತೆ‌ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಡಿಯೋ ಸಂವಾದ ನಡೆಸಿದರು.

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರು ಮಾತನಾಡಿ, ಬೆಳಗಾವಿಯ ಕೆಲ ತಾಲೂಕುಗಳಲ್ಲಿ ಮಾತ್ರ ಕೊರೊನಾ ಸೋಂಕು ಇದೆ. ಆದ್ದರಿಂದ ಎಲ್ಲೆಡೆ ಲಾಕ್ ಡೌನ್ ಹೇರಬಾರದು. ಉಳಿದ ತಾಲೂಕುಗಳಿಗೆ ರಿಯಾಯಿತಿ ನೀಡುವ ಬಗ್ಗೆ ಗಮನ ಸೆಳೆದರು.

ವಲಸೆ ಕಾರ್ಮಿಕರ ಒಂದು ಕಡೆ ಸಾರಿಗೆ ವೆಚ್ಚ ಭರಿಸಲು ಸರ್ಕಾರದ ನೆರವು ಸಿಎಂ ಭರವಸೆ ನೀಡಿದರು.

ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ತಮ್ಮ ಊರಿಗೆ ತೆರಳಲು ಸಜ್ಜಾಗಿರುವ ವಲಸೆ ಕಾರ್ಮಿಕರಿಂದ ಒಂದು ಕಡೆ ಪ್ರಯಾಣ ದರ ಪಡೆದುಕೊಂಡು ಅವರನ್ನು ಕಳಿಸುವ ವ್ಯವಸ್ಥೆ ಮಾಡಬೇಕು ಎಂದು ಮುಖ್ಯಮಂತ್ರಿ ಲ ಬಿ.ಎಸ್.ಯಡಿಯೂರಪ್ಪ ನಿರ್ದೇಶನ ನೀಡಿದರು.

ಒಂದು ಕಡೆ ಪ್ರಯಾಣ ದರ ಪಡೆದುಕೊಂಡು ಕಾರ್ಮಿಕರನ್ನು ಕಳಿಸುವ ಬಗ್ಗೆ ತಿಳಿಸಿದರು.

ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿಗಳು, ಸದ್ಯಕ್ಕೆ ಒಂದು ಕಡೆ ಪ್ರಯಾಣ ದರ ಪಡೆದು ಕಾರ್ಮಿಕರನ್ನು ಅವರ ಊರಿಗೆ ಕಳಿಸಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ನಂತರ ಸಾರಿಗೆ ಸಂಸ್ಥೆಗೆ ಕಾರ್ಮಿಕ ಇಲಾಖೆಯ ವತಿಯಿಂದ ಕಾರ್ಮಿಕ ನಿಧಿ ಒದಗಿಸಲಾಗುವುದು ಎಂದುಮುಖ್ಯಮಂತ್ರಿಗಳು ತಿಳಿಸಿದರು.

ಮೇ 4 ರಿಂದ ಬಸ್ ಸಂಚಾರ ಆರಂಭಗೊಳ್ಳಲಿದ್ದು, ಇದಾದ ಬಳಿಕ ಸಮಸ್ಯೆ ಪರಿಹಾರಗೊಳ್ಳಲಿದೆ ಎಂದು ಸಿಎಂ ಹೇಳಿದರು.

ಕೇಂದ್ರ ಸಚಿವ ಸುರೇಶ ಅಂಗಡಿ, ಶಾಸಕರಾದ ಮಹೇಶ ಕುಮಟಳ್ಳಿ, ಮಹಾಂತೇಶ ದೊಡ್ಡಗೌಡರ್, ಅನೀಲ್ ಬೆನಕೆ, ದುರ್ಯೋಧ‌ನ ಐಹೊಳೆ, ಲಕ್ಷ್ಮಿ ಹೆಬ್ಬಾಳ್ಕರ್, ಜಿಲ್ಲಾಧಿಕಾರಿ ಎಸ್. ಬಿ. ಬೊಮ್ಮನಹಳ್ಳಿ, ಪೊಲೀಸ್ ಆಯುಕ್ತ ಲೋಕೇಶ್ ಕುಮಾರ್ ಮುಂತಾದವರು ಇದ್ದರು.


Spread the love

About Laxminews 24x7

Check Also

ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ ಭವನದಲ್ಲಿ ಆಯೋಜಿಸಲಾದ “ಬಿಲ್ಡ್ ಟೆಕ್ – 2025” ಕಟ್ಟಡ ನಿರ್ಮಾಣ

Spread the love ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ