Breaking News

ಪಂಚಮಸಾಲಿ ಮೀಸಲಾತಿ ವಿಳಂಬ ಸೆಪ್ಟೆಂಬರ್ 20ರಂದು ಬೊಮ್ಮಾಯಿಯವರ ನಿವಾಸದ ಎದುರು ಒಂದು ದಿನದ ಸತ್ಯಾಗ್ರಹ

Spread the love

ಹಾವೇರಿ : ಪಂಚಮಸಾಲಿ ಮೀಸಲಾತಿ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೊಟ್ಟ ಮಾತು ತಪ್ಪಿದ್ದಾರೆ. ಮೀಸಲಾತಿ ಘೋಷಣೆಯ ವಿಳಂಬ ನೀತಿ ಖಂಡಿಸಿ ಸೆಪ್ಟೆಂಬರ್ 20ರಂದು ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿರುವ ಸಿಎಂ ಬೊಮ್ಮಾಯಿಯವರ ನಿವಾಸದ ಎದುರು ಒಂದು ದಿನದ ಸತ್ಯಾಗ್ರಹ ನಡೆಸಲಾಗುವುದು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಶ್ರೀಗಳು ತಿಳಿಸಿದರು.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯಕ್ಕೆ ಮುಖ್ಯಮಂತ್ರಿಗಳು ಆಗಸ್ಟ್ 22ರ ಒಳಗೆ ಸಿಹಿ ಸುದ್ದಿ ಕೊಡುವುದಾಗಿ ಹೇಳಿದ್ದರು. ಆದರೆ ಮುಖ್ಯಮಂತ್ರಿಗಳು ನಮ್ಮ ಸಮಾಜದ ಭಾವನೆಗಳ ಜೊತೆ ಚೆಲ್ಲಾಟ ಆಡುತ್ತಿದ್ದಾರೆ ಅನಿಸುತ್ತದೆ ಎಂದು ಶ್ರೀಗಳು ಬೇಸರ ವ್ಯಕ್ತಪಡಿಸಿದರು.

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ : ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪ ಮಾತು ತಪ್ಪಿದ್ದರು. ಈಗಿನ ಸಿಎಂ ಬಸವರಾಜ ಬೊಮ್ಮಾಯಿ ಕೂಡ ನಾಲ್ಕು ಬಾರಿ ಕೊಟ್ಟ ಮಾತು ತಪ್ಪಿದ್ದಾರೆ‌. ವಿಶ್ವಾಸಕ್ಕೆ ಅನ್ಯಾಯ ಮಾಡಿದ್ದಾರೆ. ಹೀಗಾಗಿ ಸಮಾಜದ ನಿರ್ಣಯದಂತೆ ಒಂದು ದಿನದ ಧರಣಿ ಸತ್ಯಾಗ್ರಹ ಮಾಡಲಾಗುವುದು ಎಂದು ಶ್ರೀಗಳು ಹೇಳಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ