Breaking News

ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್ : ಮೀನುಗಾರರಂತೆ ರೈತರಿಗೂ ಡೀಸೆಲ್ ರಿಯಾಯ್ತಿ

Spread the love

ಧಾರವಾಡ : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮೀನುಗಾರರಿಗೆ ನೀಡಲಾಗುತ್ತಿರುವ ಡೀಸೆಲ್ ಸಬ್ಸಿಡಿ ಮಾದರಿಯಲ್ಲಿ ರೈತರಿಗೂ ರೈತ ಶಕ್ತಿ ಯೋಜನೆ ಮೂಲಕ ಡೀಸೆಲ್ ರಿಯಾಯ್ತಿ ನೀಡಲು ನಿರ್ಧರಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

 

ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರೈತರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ರೈತ ಶಕ್ತಿ ಯೋಜನೆ ಜಾರಿಗೊಳಿಸಿದೆ. ಸಾಮಾನ್ಯವಾಗಿ ರೈತರು ಬಿತ್ತನೆ ಸೇರಿ ಕೃಷಿ ಚಟುವಟಿಕೆಗಳಿಗೆ ಪ್ರತಿ ಎಕರೆಗೆ 25 ಲೀಟರ್ ಡೀಸೆಲ್ ಖರ್ಚು ಮಾಡುತ್ತಾರೆ. ಎಕರೆಗೆ 20 ಲೀಟರ್ ಗೆ ತಲಾ 25 ರೂ.ರಂತೆ ರಿಯಾಯ್ತಿಗೆ ಆಗ್ರಹಿಸಿದ್ದೆ, ಆದರೆ ಸಿಎಂ ಬೊಮ್ಮಾಯಿ ಎಕರೆಗೆ 10 ಲೀಟರ್ ಗೆ 25 ರೂ.ನಂತೆ ಐದು ಎಕೆರೆಗೆ 1,250 ರೂ. ರಿಯಾಯ್ತಿ ನೀಡಲು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ