Breaking News

ಅಕ್ರಮ ಹಣ ವರ್ಗಾವಣೆ ಕೇಸ್; ಇ.ಡಿ ಕಚೇರಿಗೆ ಹಾಜರಾದ ಡಿಕೆ

Spread the love

ಬೆಂಗಳೂರು: ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್ ನೀಡಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿದ್ದಾರೆ. ಇಂದು 12 ಗಂಟೆ ಸುಮಾರಿಗೆ ಇ.ಡಿ.ಕಚೇರಿಗೆ ಹಾಜರಾಗಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್​ಗೆ ಇ.ಡಿ ಅಧಿಕಾರಿಗಳು ಬುಲಾವ್ ನೀಡಿದ್ದಾರೆ. ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿದ್ದ ಇ.ಡಿ, ಈಗಾಗಲೇ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್​​​ಶೀಟ್​​​​ ಸಲ್ಲಿಕೆ ಮಾಡಿದೆ. ನ್ಯಾಯಾಲಯದಲ್ಲಿ ಇದರ ವಿಚಾರಣೆ ಕೂಡ ಪ್ರಗತಿಯಲ್ಲಿದೆ. ಈ ನಡುವೆ ಜಾರಿ ನಿರ್ದೇಶನಾಲಯ ಹೆಚ್ಚುವರಿಯಾಗಿ ಎಫ್‍ಐಆರ್​ ದಾಖಲಿಸಿದ್ದು, ಅದಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ನೋಟಿಸ್ ನೀಡಿತ್ತು. ಅದರ ಅನುಸಾರ ಡಿ. ಕೆ ಶಿವಕುಮಾರ್ ವಿಚಾರಣೆ ಎದುರಿಸಲಿದ್ದಾರೆ.

About Laxminews 24x7

Check Also

ಸುಗಮ ಸಂಚಾರಕ್ಕಾಗಿ ಹೆಬ್ಬಾಳ ಮೇಲ್ಸೇತುವೆ ಎರಡನೇ ಲೂಪ್ ಉದ್ಘಾಟಿಸಿದ ಡಿಸಿಎಂ ಡಿಕೆಶಿ

Spread the loveಬೆಂಗಳೂರು: ಹೆಬ್ಬಾಳ ಮೇಲ್ಸೇತುವೆಯ ಎರಡನೇ ಲೂಪ್ ಅನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು.‌ ಆ ಮೂಲಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ