Breaking News
Home / ರಾಜಕೀಯ / ಇನ್ಮುಂದೆ ಪೌರ ಕಾರ್ಮಿಕರು ಸರ್ಕಾರಿ ನೌಕರರು

ಇನ್ಮುಂದೆ ಪೌರ ಕಾರ್ಮಿಕರು ಸರ್ಕಾರಿ ನೌಕರರು

Spread the love

ಬೆಂಗಳೂರು : ಬಹು ದಿನಗಳ ಬೇಡಿಕೆಯಂತೆ ರಾಜ್ಯದ ನಗರಸಭೆ ಪುರಸಭೆ , ಪಟ್ಟಣ ಸೇರಿದಂತೆ
ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದ 11,133 ಪೌರಕಾರ್ಮಿಕರಿಗೆ ವಿಶೇಷ ನೇಮಕಾತಿ ನಿಯಮಗಳ ಅಡಿಯಲ್ಲಿ ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

 

ಸೋಮವಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.

ಬಿಬಿಎಂಪಿಯ 3673 ನೌಕರರು, ನಗರಸಭೆ ಮತ್ತು ಪುರಸಭೆಗಳಲ್ಲಿನ 5533, ಮಹಾನಗರ ಪಾಲಿಕೆಗಳಲ್ಲಿನ 1927 ಹೊರ ಗುತ್ತಿಗೆ ನೌಕರರುಸೇರಿದಂತೆ ಒಟ್ಟು 11133ರ ನೌಕರರ ಸೇವೆ ಖಾಯಮಾತಿ ಆಗಲಿದೆ.
ಸರ್ಕಾರದ ನಿರ್ಧಾರದಿಂದ ಇನ್ನು ಮುಂದೆ ಈ ನೌಕರರು ಈಗ17000-28980 ವೇತನ ಶ್ರೇಣಿ ಅಡಿಯಲ್ಲಿ ಸೇವೆ ಸಲ್ಲಿಸುವಂತೆ ಅವಕಾಶ ಕಲ್ಪಿಸಲಾಗಿದೆ.

ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಅವರ ಸೇವೆಯನ್ನು ಖಾಯಂಗೊಳಿಸಲಾಗಿದೆ.


Spread the love

About Laxminews 24x7

Check Also

ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

Spread the love ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ