ರಾಮದುರ್ಗ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಹೊಸೂರ ಗ್ರಾಮದ ಬಳಿ ಸೋಮವಾರ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಪೂಲ್ ಕೆಳಗೆ ಬಿಸಾಕಲಾಗಿದೆ.
ಪಾಂಡಪ್ಪ ದುಂಡಪ್ಪ ಜಟಕನ್ನವರ (35) ಕೊಲೆಯಾದವರು. ಬೇರೆಡೆ ಕೊಲೆಗೈದು ಹೊಸೂರ ಹಳ್ಳದ ಬಳಿ ಶವ ಎಸೆಯಲಾಗಿದೆ.
ವ್ಯಕ್ತಿಯ ಮೈತುಂಬ ಮಾರಕಾಸ್ತ್ರಗಳಿಂದ ಕೊಚ್ಚಲಾಗಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡು ಜನ ಬೆಚ್ಚಿದರು. ಸ್ಥಳದಲ್ಲಿ ಅವರ ಬೈಕ್ ಕೂಡ ಇದೆ.
ಕಟಕೋಳ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದರು. ಶವವನ್ನು ಮರಣೋತ್ತರ ಪರೀಕ್ಷೆಗೆ ರಾಮದುರ್ಗ ತಾಲ್ಲೂಕು ಆಸ್ಪತ್ರೆಗೆ ಸಾಗಿಸಲಾಯಿತು.
ಕೊಲೆಗೆ ಕಾರಣ ಹಾಗೂ ಆರೋಪಿಗಳ ಸುಳಿವು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Laxmi News 24×7