Breaking News

ದೇವೇಗೌಡರನ್ನು ಕಂಡೊಡನೆ ಕಾಲುಮುಟ್ಟಿ ನಮಸ್ಕರಿಸಲು ಮುಂದಾದ ಯಡಿಯೂರಪ್ಪ, ಕೂಡಲೇ ಕೈಹಿಡಿದುಕೊಂಡ ಗೌಡರು

Spread the love

ಬೆಂಗಳೂರು: ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಗ್ಯ ವಿಚಾರಿಸಿದ್ದಾರೆ.

ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ ದೇವೇಗೌಡರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ನಿವಾಸಕ್ಕೆ ತೆರಳಿದ ಯಡಿಯೂರಪ್ಪ ಅವರು ದೇವೇಗೌಡರ ಕಾಲುಮಟ್ಟಿ ನಮಸ್ಕರಿಸಲು ಮುಂದಾಗಿದ್ದು, ಈ ವೇಳೆ ದೇವೇಗೌಡರು ತಕ್ಷಣ ಯಡಿಯೂರಪ್ಪನವರ ಕೈ ಹಿಡಿದುಕೊಂಡಿದ್ದಾರೆ.

 

ದೇವೇಗೌಡರಿಗೆ ಮಂಡಿ ನೋವು ಇದೆ. ನೆನಪಿನ ಶಕ್ತಿ ಚೆನ್ನಾಗಿದೆ. ಒಂದು ತಿಂಗಳ ಹಿಂದೆಯೇ ಅವರನ್ನು ಭೇಟಿ ಮಾಡಬೇಕೆಂದುಕೊಂಡಿದ್ದೆ. ದೇವೇಗೌಡರ ಅನಾರೋಗ್ಯದ ಬಗ್ಗೆ ಪುತ್ರ ಕುಮಾರಸ್ವಾಮಿ ಹೇಳಿದ್ದರು ಎಂದು ದೇವೇಗೌಡರ ಭೇಟಿಯ ನಂತರ ಯಡಿಯೂರಪ್ಪ ಹೇಳಿದ್ದಾರೆ.

ನಿನ್ನೆಯಷ್ಟೇ ಮಾಜಿ ಸಿಎಂ ಸಿದ್ಧರಾಮಯ್ಯ ಸೇರಿದಂತೆ ಹಲವರು ನಾಯಕರು ದೇವೇಗೌಡರ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದ್ದರು


Spread the love

About Laxminews 24x7

Check Also

ಯಾವುದೇ ದೂರದೃಷ್ಟಿ ಇಲ್ಲದ ನೀರಸ ಆಯವ್ಯಯ ಪತ್ರ ಇದು- ಬಿವೈವಿ

Spread the love ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಬಜೆಟ್ ಮೂಲಕ ರಾಜ್ಯದ ಜನತೆಗೆ ನಿರಾಶೆ ಉಂಟು ಮಾಡಿದ್ದಾರೆ. ಯಾವುದೇ ದೂರದೃಷ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ