ಬೆಂಗಳೂರು:ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಂಪುಟ ಸಹುದ್ಯೋಗಿಗಳೊಂದಿಗೆ ಬುಧವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಪದ್ಮನಾಭನಗರದ ಮಾಜಿ ಪ್ರಧಾನ ಮಂತ್ರಿಗಳ ನಿವಾಸದಲ್ಲಿ ಭೇಟಿ ಮಾಡಿ ಕೆಲ ಹೊತ್ತು ಮಾತನಾಡಿದ ಸಿಎಂ ಬೊಮ್ಮಾಯಿ ಅವರು ಕ್ಷೇಮ ವಿಚಾರಿಸಿದರು.
ಸಿಎಂ ಅವರೊಂದಿಗೆ ಸಚಿವರಾದ ಆರ್.ಅಶೋಕ್, ಮಾಧುಸ್ವಾಮಿ, ಗೋಪಾಲಯ್ಯ, ಬೈರತಿ ಬಸವರಾಜು, ಸೋಮಣ್ಣ, ಮುನಿರತ್ನ ಅವರೂ ಸದನದ ಕಲಾಪದ ನಡುವೆಯೂ ಸಿಎಂ ಬೊಮ್ಮಾಯಿ ಅವರೊಂದಿಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
Laxmi News 24×7