Breaking News

ಅಥಣಿಯಲ್ಲಿ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ.. ನವಜಾತ ಮಗು ಪತ್ತೆ.. ಸಿಕ್ಕಿ ಬಿದ್ದ ಕಳ್ಳಿ

Spread the love

ಅಥಣಿ: ಸಿನಿಮೀಯ ಮಾದರಿಯಲ್ಲಿ ಸರ್ಕಾರಿ ಆಸ್ಪತ್ರೆಯಿಂದ ನವಜಾತ ಶಿಶು ಕಳ್ಳತನ ಮಾಡಿದ ಘಟನೆ ನಗರದಲ್ಲಿ ನಡೆದಿದೆ. ಆದರೆ, ಎರಡೂವರೆ ಗಂಟೆಯಲ್ಲಿ ಮಗುವನ್ನು ಬೆಳಗಾವಿ ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕು ಆಸ್ಪತ್ರೆಯಲ್ಲಿ ನಿನ್ನೆಯಷ್ಟೇ ಜನಿಸಿದ್ದ ನವಜಾತ ಗಂಡು ಮಗು ಪತ್ತೆ ಹಚ್ಚಿ ತಾಯಿಗೆ ಹಸ್ತಾಂತರಿಸುವಲ್ಲಿ ಅಥಣಿ ಮತ್ತು ಕಾಗವಾಡ ಪೊಲೀಸರು ಯಶಸ್ವಿಯಾಗಿದ್ದು, ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

ಇಂದು ಬೆಳಗಿನ ಜಾವ 10.15 ಕ್ಕೆ ಸರ್ಕಾರಿ ಆಸ್ಪತ್ರೆಗೆ ನರ್ಸ್ ವೇಷಧಾರಿಯಾಗಿ ಆಸ್ಪತ್ರೆಗೆ ಆಗಮಿಸಿದ್ದ ಓರ್ವ ಮಹಿಳೆ ಮತ್ತು ಅವರ ತಂಡ ನೇರವಾಗಿ ಆಸ್ಪತ್ರೆಯ ವಾರ್ಡ್​ಗೆ ತೆರಳಿ ಎಲ್ಲ ಬಾಣಂತಿಯರು ತಾಯಿ ಕಾರ್ಡ್ ಹಾಗೂ ಆಧಾರ್​ ಕಾರ್ಡ್​ ಜೆರಾಕ್ಸ್ ಕೊಡಬೇಕು ಅಂತ ಹೇಳಿ ಗಮನ ಬೇರೆಡೆ ಸೆಳೆದಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ