Breaking News

ಚನ್ನಮ್ಮನ ಕಿತ್ತೂರು: ಅರಳಿಕಟ್ಟಿ ಸರ್ಕಲ್‌ನಲ್ಲಿ ನಿಲ್ಲಲು ಸಮರ್ಪಕ ಬಸ್‌ ತಂಗುದಾಣ ಇಲ್ಲ

Spread the love

ಕಿತ್ತೂರು: ಅರಳಿಕಟ್ಟಿ ಸರ್ಕಲ್‌ನಲ್ಲಿ ನಿಲ್ಲಲು ಸಮರ್ಪಕ ಬಸ್‌ ತಂಗುದಾಣ ಇಲ್ಲದೇ ಸಾರ್ವಜನಿಕರು ಮಳೆಗಾಲ-ಬೇಸಿಗೆಯಲ್ಲಿ ಪರದಾಡುವಂತಾಗಿದೆ.

ಕಿತ್ತೂರು ಸುತ್ತಮುತ್ತಲಿನ ಗ್ರಾಮಗಳಾದ ನಂದಿಹಳ್ಳಿ, ಕಲಭಾವಿ, ಶಿವನೂರು, ಮರಿಗೇರಿ, ಜಮಳೂರು, ಹೂಲಿಕಟ್ಟಿ, ಉಗರಕೋಡ, ತೇಗೂರು, ಖೋದಾನಪೂರ ಸಂಗೊಳ್ಳಿ ಸೇರಿದಂತೆ ಇನ್ನೂ ಅನೇಕ ಗ್ರಾಮಗಳಿಂದ ಕೆಲಸಕ್ಕೆ ಗ್ರಾಮಸ್ಥರು, ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಬಸ್‌ ಮುಖಾಂತರ ಆಗಮಿಸುತ್ತಾರೆ.

ಅವರು ಮರಳಿ ತಮ್ಮ ತಮ್ಮ ಗ್ರಾಮಗಳಿಗೆ ಹೋಗುವಾಗ ಅರಳಿಕಟ್ಟಿ ಸರ್ಕಲ್‌ನಲ್ಲಿ ಇರುವ ಬಸ್‌ ತಂಗುದಾಣ ಚಿಕ್ಕದಿರುವುದರಿಂದ ಬಹುತೇಕರಿಗೆ ನೆರಳಲ್ಲಿ ನಿಲ್ಲಲು-ಕುಳಿತುಕೊಳ್ಳಲು ಸಿಗುತ್ತಿಲ್ಲ.

ಈಗ ಮಳೆಯಿಂದ ರಸ್ತೆಗಳು ಹದಗೆಟ್ಟಿದ್ದು, ಬಹುತೇಕ ಬಸ್‌ಗಳು ತಡವಾಗಿ ಸಂಚರಿಸುತ್ತಿರುವುದರಿಂದ, ಬಸ್‌ ಬರುವವರೆಗೆ ಸುರಿಯುವ ಮಳೆಯಲ್ಲಿ ನೆನೆದು ಮತ್ತು ಬೇಸಿಗೆಯಲ್ಲಿ ನೆತ್ತಿ ಸುಡುವ ಬಿಸಿಲಿನಲ್ಲಿ ಕಾಯುವ ದುಸ್ಥಿತಿ ಇದೆ. ಇದರಿಂದ ಮುಖ್ಯವಾಗಿ ವಿದ್ಯಾರ್ಥಿನಿಯರು, ಮಹಿಳೆಯರು, ವೃದ್ಧರು ಪರದಾಡುವಂತಾಗಿದೆ.


Spread the love

About Laxminews 24x7

Check Also

ಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ

Spread the loveಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ ವಿರೋಧಿಗಳ ಸುಳ್ಳು ವದಂತಿಗಳಿಗೆ ಕಿವಿಗೋಡಬೇಡಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ