Breaking News

ಜಾತಿ ನಿಂದನೆ ಆರೋಪದಲ್ಲಿ ಸುಳ್ಳು ದೂರು ದಾಖಲಿಸಿದ್ರೆ ಬೀಳುತ್ತೆ ದಂಡ!

Spread the love

ಬೆಂಗಳೂರು: ಜಾತಿ ನಿಂದನೆ ಆರೋಪದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ನಗರದ ಅಪಾರ್ಟ್ಮೆಂಟ್‌ವೊಂದರ ನಿವಾಸಿಗಳ ಸಂಘದ ಪದಾಧಿಕಾರಿಗಳ ವಿರುದ್ಧ ಸುಳ್ಳು ದೂರು ದಾಖಲಿಸಿದ್ದ ವ್ಯಕ್ತಿಗೆ ಹೈಕೋರ್ಟ್ 25,000 ರೂಪಾಯಿ ದಂಡ ವಿಧಿಸಿದೆ.

 

 

 

ಬೆಂಗಳೂರು ನಗರದ ಕೈಲಾಶ್ ಅಪಾರ್ಟ್ಮೆಂಟ್ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅರುಣ ಕಣ್ಣೂರು, ಸಂಘದ ಕಾರ್ಯದರ್ಶಿ ರಾಮಲಿಂಗಯ್ಯ ಮತ್ತು ಅಪಾರ್ಟ್ಮೆಂಟ್ ನಿವಾಸಿಯಾಗಿರುವ ಬಿ.ಎನ್. ಅಭಿಷೇಕ್ ಅವರ ವಿರುದ್ಧದ ಅದೇ ಅಪಾರ್ಟ್ಮೆಂಟ್ ನಿವಾಸಿಯಾಗಿರುವ ಕೆ.ಎಸ್ ರವಿಕುಮಾರ್ ಖಾಸಗಿ ದೂರು ದಾಖಲಿಸಿದ್ದರು.

ದೂರಿನ ಆಧಾರದಲ್ಲಿ ಕೆಂಗೇರಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದರು. ಪ್ರಕರಣವನ್ನು ರದ್ದು ಕೋರಿ ಸಂಘದ ಅಧ್ಯಕ್ಷ ಅರುಣ ಕಣ್ಣೂರು ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾ.ಸೂರಜ್‌ ಗೋವಿಂದರಾಜು ಅವರಿದ್ದ ನ್ಯಾಯಪೀಠ ಖಾಸಗಿ ದೂರು ಮತ್ತು ಕೆಂಗೇರಿ ಪೊಲೀಸ್ ಠಾಣೆಯಲ್ಲಿನ ಪ್ರಕರಣ ರದ್ದುಪಡಿಸಿ ಆದೇಶ ಹೊರಡಿಸಿದೆ. ಅಲ್ಲದೆ, ಸಕಾರಣವಿಲ್ಲದೆ ದೂರು ದಾಖಲಿಸಿರುವ ರವಿಕುಮಾರ್ ಅವರಿಗೆ 25 ಸಾವಿರ ರೂಪಾಯಿ ದಂಡ ವಿಧಿಸಿದೆ. ಜೊತೆಗೆ, ಇದೊಂದು ಕಾನೂನು ದುರ್ಬಳಕೆಯಾಗಿದೆ ಎಂದು ಅಭಿಪ್ರಾಯಪಟ್ಟಿದೆ.

ಜೊತೆಗೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಯ್ದೆಯಡಿ ಸುಳ್ಳು ದೂರು ದಾಖಲಿಸಿ ದುರ್ಬಳಕೆ ಮಾಡಿಕೊಳ್ಳುತ್ತಿರುವುದರಿಂದ ನಿಜವಾಗಿಯೂ ದೌರ್ಜನ್ಯಕ್ಕೆ ತುತ್ತಾದವರಿಗೆ ಈ ಕಾಯ್ದೆಯ ಪ್ರಯೋಜನಗಳನ್ನು ಪಡೆಯಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.

 


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ