Breaking News

ರಸ್ತೆ ತಡೆದು ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

Spread the love

ಬೆಂಗಳೂರು: ನೂರಾರು ಕೋಟಿಯ ನಕಲಿ ಬಿಲ್ಲು, ಕಳಪೆ ಕಾಮಗಾರಿ ವಿರುದ್ಧ ಕಾಂಗ್ರೆಸ್ ಪಕ್ಷದ ಮುಖಂಡ ಅನೂಪ್ ಅಯ್ಯಂಗಾರ್ ನೇತೃತ್ವದಲ್ಲಿ ಇಂದು ಕಾವೇರಿ ಥೀಯಟರ್ ಮುಖ್ಯ ರಸ್ತೆಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು.

ಸ್ಥಳೀಯ ಶಾಸಕ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ವಿರುದ್ಧ 100ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ರಸ್ತೆಯಲ್ಲೇ ಕುಳಿತು ಪ್ರತಿಭಟಿಸಿದರು.

ಪಾಲಿಕೆಯ ವಾರ್ಡ್‌ಗಳಲ್ಲಿ ನಕಲಿ ಬಿಲ್ಲುಗಳನ್ನು ಪಾಸ್ ಮಾಡಲಾಗಿದೆ. ಬಿಬಿಎಂಪಿ ಅಧಿಕಾರಿಗಳೇ ತಮ್ಮ ಅಸಹಾಯತೆ ವ್ಯಕ್ತಪಡಿಸಿದ್ದಾರೆ. ಇದನ್ನು ಸಂಪೂರ್ಣವಾಗಿ ವಿಚಾರಣೆಗೆ‌ ಒಳಪಡಿಸಬೇಕು. ಡಾ‌.ಸಿ ಎನ್ ಅಶ್ವತ್ಥ ನಾರಾಯಣ ಒತ್ತಡದಿಂದ ನಕಲಿ ಬಿಲ್‌ಗಳು ರೆಡಿಯಾಗಿವೆ ಎಂದು ಘೋಷಣೆ ಕೂಗಿದರು.

ಕಾಂಗ್ರೆಸ್ ಪಕ್ಷದ ಮುಖಂಡ ಅನೂಪ್ ಅಯ್ಯಂಗಾರ್ ಮಾತನಾಡಿ, ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಾದ ಸಮಸ್ಯೆಯನ್ನು ತನ್ನ ಕ್ಷೇತ್ರದಲ್ಲೇ ಪ್ರಶ್ನಿಸುವುದು ತನ್ನ ಹಕ್ಕು, ಅನ್ಯಾಯದ ವಿರುದ್ದ ಹೋರಾಡುವುದು ತಪ್ಪು ಎನ್ನುವ ರೀತಿಯಲ್ಲಿ ಆಗಿ ಹೋಗಿದೆ. ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಬ್ರಹ್ಮಾಂಡ ಭ್ರಷ್ಟಚಾರವಾಗಿದೆ. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಕಡತಗಳಿಗೆ ಬೆಂಕಿಯಿಟ್ಟ ಪ್ರಕರಣ 10 ವರ್ಷಗಳಿಂದ ತನಿಖೆಯಲ್ಲಿದೆ. ಈ ಕುರಿತು ಸಿಐಡಿ ಶೀಘ್ರಗತಿಯಲ್ಲಿ ವಿಚಾರಣೆ ಮಾಡಿ, ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು.


Spread the love

About Laxminews 24x7

Check Also

ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು!

Spread the love ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ