Breaking News

ಬೆಳಗಾವಿಯನ್ನು ವಿಭಜಿಸಲು ಸಿಎಂಗೆ ಒಳ್ಳೆ ಬುದ್ಧಿ ನೀಡಲಿ- ಭಕ್ತನಿಂದ ಸವದತ್ತಿ ಯಲ್ಲಮ್ಮನಿಗೆ ಹರಕೆ

Spread the love

ಬೆಳಗಾವಿ: ಭಕ್ತರೊಬ್ಬ ಬೆಳಗಾವಿ (Belagavi) ಜಿಲ್ಲೆ ವಿಭಜನೆ ಮಾಡುವಂತೆ ಆಗ್ರಹಿಸಿ ಸವದತ್ತಿ ಯಲ್ಲಮ್ಮದೇವಿಗೆ (Savadatti Yallamma) ಹರಕೆ ಪತ್ರ ಬರೆದಿದ್ದು, ಬೆಳಗಾವಿಯನ್ನು 4 ಜಿಲ್ಲೆಗಳಾಗಿ ವಿಭಜಿಸಲು ಸಿಎಂಗೆ ಒಳ್ಳೆ ಬುದ್ಧಿ ನೀಡಲೆಂದು ಹರಕೆ ಪತ್ರ ಬರೆದು ಬೇಡಿಕೆ ಇಟ್ಟಿದ್ದಾನೆ.

 

ಬೆಳಗಾವಿ ಜಿಲ್ಲೆ ಸವದತ್ತಿ ಹೊರವಲಯದಲ್ಲಿರುವ ರೇಣುಕಾ ಯಲ್ಲಮ್ಮ ದೇವಿಗೆ ಪತ್ರ ಬರೆಯಲಾಗಿದೆ. ಬೆಳಗಾವಿ ಜಿಲ್ಲೆಯನ್ನು ನಾಲ್ಕು ಜಿಲ್ಲೆಯಾಗಿ ವಿಭಜಿಸುವಂತೆ ಸುದೀರ್ಘ 4 ಪುಟಗಳ ಪತ್ರ ಬರೆದಿದ್ದು, ಬೆಳಗಾವಿಯನ್ನು 4 ಜಿಲ್ಲೆಗಳಾಗಿ ವಿಭಜಿಸಲು ಸಿಎಂಗೆ ಒಳ್ಳೆ ಬುದ್ಧಿ ನೀಡಲೆಂದು ಬೇಡಿಕೆ ಇಟ್ಟಿದ್ದಾನೆ. ಅದರಲ್ಲಿ ಪ್ರಮುಖವಾಗಿ ಬೆಳಗಾವಿ, ಗೋಕಾಕ, ಚಿಕ್ಕೋಡಿ, ಬೈಲಹೊಂಗಲ ಜಿಲ್ಲೆಯನ್ನು ಮಾಡುವಂತೆ ಹರಕೆ ಹೊತ್ತು ದೇವರ ಕಾಣಿಕೆ ಹುಂಡಿಯಲ್ಲಿ ಪತ್ರ ಬರೆದು ಹಾಕಿದ್ದಾರೆ. ಜೆ.ಹೆಚ್.ಪಟೇಲ್ ಸಿಎಂ ಆಗಿದ್ದಾಗ ಬೆಳಗಾವಿ ಜಿಲ್ಲೆಯಲ್ಲಿ 10 ತಾಲೂಕು ಇದ್ದವು.1997ರಲ್ಲಿ ಬೆಳಗಾವಿ, ಚಿಕ್ಕೋಡಿ, ಗೋಕಾಕ ಸೇರಿ ಮೂರು ಜಿಲ್ಲೆಗಳಾಗಿ ಘೋಷಣೆ ಮಾಡಲಾಗಿತ್ತು.

ಈಗ 14 ತಾಲೂಕು ಆಗಿದ್ದು, ಈಗ 4 ಜಿಲ್ಲೆಗಳನ್ನಾಗಿ ಮಾಡಬೇಕು. ಯಾದಗಿರಿಯಲ್ಲಿ 3 ತಾಲೂಕು ಇದ್ದರೂ, ಅದನ್ನು ಜಿಲ್ಲೆ ಮಾಡಿದ್ದಾರೆ. ಕೊಡಗುವಿನಲ್ಲಿ 2 ವಿಧಾನ ಸಭಾ ಕ್ಷೇತ್ರ ಇದ್ದರೂ, ಅದನ್ನು ಜಿಲ್ಲೆ ಮಾಡಿದ್ದಾರೆ. ಹಾಗೇ ನಮ್ಮ ಜಿಲ್ಲೆಯಲ್ಲಿ 14 ತಾಲೂಕು, 18 ವಿಧಾನ ಸಭಾ ಕ್ಷೇತ್ರವಿದ್ದು, 4 ಜಿಲ್ಲೆಗಳನ್ನಾಗಿ ಮಾಡಬೇಕು. 4 ಜಿಲ್ಲೆ ಮಾಡಿ ಎರಡು ಪ್ರತ್ಯೇಕ ಉಪವಿಭಾಗಾಧಿಕಾರಿ ಕಚೇರಿಯನ್ನು ಮಾಡಬೇಕು. ಈಗಾಗಲೇ ಹುಂಡೇಕರ್, ವಾಸುದೇವ, ಗದ್ದಿಗೌಡರ ಸಮಿತಿ ಗೋಕಾಕ ಜಿಲ್ಲೆಗೆ ಶಿಫಾರಸು ಮಾಡಿವೆ


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ