Breaking News

ಬೊಮ್ಮಾಯಿಯವರ ಬಂಡಲ್‍ನಿಂದಾಗಿ ಕಲ್ಯಾಣ ಕರ್ನಾಟಕ ಹಿನ್ನೆಡೆ – ಪ್ರಿಯಾಂಕ್ ಖರ್ಗೆ ಟೀಕೆ

Spread the love

ಕಲಬುರಗಿ: ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಗೆ 5,000 ಕೋಟಿ ರೂ. ನೀಡುವುದಾಗಿ ಹೇಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೂಗಿಗೆ ತುಪ್ಪ ಸವರಿ ಹೋಗಿದ್ದಾರೆ. ಮುಂದೆ ಚುನಾವಣೆ ಬರುತ್ತಿದೆ ಈ ಅನುದಾನ ಬಿಡುಗಡೆ ಅಸಾಧ್ಯಾ ಎಂದು ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಕೆಆರ್‌ಡಿಬಿಗೆ ಘೋಷಿತ ಅನುದಾನ 3,000 ಕೋಟಿ ರೂಪಾಯಿಯಲ್ಲಿ ಕೇವಲ 1,500 ರೂಪಾಯಿ ಕೋಟಿ ಮಾತ್ರ ಬಿಡುಗಡೆ ಮಾಡಿ ಉಳಿದ 1,500 ಕೋಟಿ ರೂಪಾಯಿಯನ್ನು ಎಸ್‍ಡಿಪಿನಲ್ಲಿ ಬಿಡುಗಡೆ ಮಾಡದೇ ಮಹಾತ್ವಾಕಾಂಕ್ಷೆ ತಾಲೂಕುಗಳೆಂದು ಮರುನಾಮಕರಣ ಮಾಡಿ ಬಿಡುಗಡೆ ಮಾಡುತ್ತಿದ್ದಾರೆ. ಆ ಅನುದಾನ ಹೆಡ್ ಆಫ್ ಅಕೌಂಟ್‍ಗೆ ಬರುವುದಿಲ್ಲ.

ಘೋಷಿತ ಅನುದಾನವನ್ನೇ ಸರಿಯಾಗಿ ಬಿಡುಗಡೆ ಮಾಡದ ಸಿಎಂ ಮತ್ತೆ 5,000 ಕೋಟಿ ರೂ. ನೀಡುವುದಾಗಿ ಹೇಳಿದ್ದಾರೆ. ಇದನ್ನು ಗಮನಿಸಿದರೆ, ಬೊಮ್ಮಾಯಿ ಅವರು ಮೋದಿಗಿಂತಲೂ ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿದ್ದಾರೆ. ಡಬಲ್ ಇಂಜಿನ್ ಸರ್ಕಾರದ ದೋಖಾ ಹಾಗೂ ಬೊಮ್ಮಾಯಿಯವರ ಬಂಡಲ್‍ನಿಂದಾಗಿ ಕಲ್ಯಾಣ ಕರ್ನಾಟಕ ಹಿನ್ನೆಡೆಯಾಗುತ್ತಿದೆ ಎಂದು ಹರಿಹಾಯ್ದರು.


Spread the love

About Laxminews 24x7

Check Also

ಒಂದೇ ತಿಂಗಳಲ್ಲಿ 3 ಬಾರಿ ಲಘು ಭೂಕಂಪ: ಬೆಚ್ಚಿಬಿದ್ದ ವಿಜಯಪುರ ಜನ

Spread the loveವಿಜಯಪುರ: ಜಿಲ್ಲೆಯಲ್ಲಿ ಮತ್ತೆ ಭೂಕಂಪನದ ವಾತಾವರಣ ಮನೆ ಮಾಡಿದೆ. ಕಳೆದ ಹಲವು ವರ್ಷಗಳಿಂದ ವಿಜಯಪುರ ಜಿಲ್ಲೆಯ ವಿವಿಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ