Breaking News
Home / ಜಿಲ್ಲೆ / ಬೆಂಗಳೂರು / ಪೌರ ಕಾರ್ಮಿಕರ ಕೆಲಸ ನೋಡಿದ್ರೆ ಕಣ್ಣೀರು ಬರುತ್ತೆ

ಪೌರ ಕಾರ್ಮಿಕರ ಕೆಲಸ ನೋಡಿದ್ರೆ ಕಣ್ಣೀರು ಬರುತ್ತೆ

Spread the love

ಬೆಂಗಳೂರು: ಎರಡು ದಿನಗಳ ಹಿಂದೆಯಷ್ಟೇ ಸಂಪುಟದಲ್ಲಿ (Legislative Assembly) ಪೌರ ಕಾರ್ಮಿಕರ (Civic Workers) ಕಾಯಂ ಮಾಡುವ ತೀರ್ಮಾನ ತೆಗೆದುಕೊಂಡಿದ್ದ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಇಂದು ಪೌರಕಾರ್ಮಿರ ದಿನಾಚರಣೆಯ ಪ್ರಯುಕ್ತ ಉಪಾಹಾರ ಸವಿದಿದ್ದಾರೆ.

ರೇಸ್‌ಕೋರ್ಸ್‌ನಲ್ಲಿರುವ ತಮ್ಮ ನಿವಾಸದಲ್ಲಿ 500ಕ್ಕೂ ಹೆಚ್ಚು ಪೌರಕಾರ್ಮಿಕರಿಗೆ ಉಪಹಾರ ವ್ಯವಸ್ಥೆ ಏರ್ಪಡಿಸಿದ್ದರು. ಬೆಳಿಗ್ಗೆ 9.30ಕ್ಕೆ ಸಿಎಂ ಸಹ ಪೌರ ಕಾರ್ಮಿಕರೊಂದಿಗೆ ಇಡ್ಲಿ, ವಡೆ, ಉಪ್ಪಿಟ್ಟು, ಕೇಸರಿಬಾತ್ ಉಪಹಾರ ಸವಿದಿದ್ದಾರೆ. 

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಪೌರಕಾರ್ಮಿಕರು ಯಾವ ರೀತಿ ಕೆಲಸ ಮಾಡ್ತಾರೆ ಅಂತಾ ನೋಡಿದ್ರೆ ಕಣ್ಣೀರು ಬರುತ್ತೆ ಎಂದು ಭಾವುಕರಾಗಿದ್ದಾರೆ.

ಬಹಳ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರಿಗಾಗಿ ಒಂದು ಸಮಿತಿ ಮಾಡಿದ್ದೇವೆ. ಅಲ್ಲದೇ 11,133 ಪೌರ ಕಾರ್ಮಿಕರ ಕಾಯಂ ನೇಮಕಾತಿಯನ್ನು ತಕ್ಷಣ ಮಾಡಲಾಗುತ್ತದೆ. ಮುಂದಿನ ದಿನಗಳಲ್ಲಿ ಎಲ್ಲ 43 ಸಾವಿರ ಪೌರಕಾರ್ಮಿಕರನ್ನೂ ಕಾಯಂ ಮಾಡಲಾಗುತ್ತದೆ. ಪೌರಕಾರ್ಮಿಕರಿಗೆ ಸೇವೆ ಮಾಡಲು ಭಗವಂತ ಅವಕಾಶ ಕೊಟ್ಟಿದ್ದಾನೆ. ಈ ವಿಚಾರದಲ್ಲಿ ಯಾರೂ ಗೊಂದಲ ಮಾಡಿಕೊಳ್ಳುವ ಅಗತ್ಯ ಇಲ್ಲ. ನಾನು ಸಿಎಂ ಆಗಿ ನನ್ನ ಕರ್ತವ್ಯ ಮಾಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ


Spread the love

About Laxminews 24x7

Check Also

ದೇಶದಲ್ಲಿ ಸಂವಿಧಾನ ಬದಲಿಸಿದ್ರೆ ರಕ್ತಪಾತವಾಗುತ್ತೆ : ಸಿಎಂ

Spread the loveಬೆಂಗಳೂರು : ಜೆಪಿಯವರು ಸಂವಿಧಾನ ಬದಲಾವಣೆ ಮಾಡುವ ಒಳಸಂಚು ರೂಪಿಸಿದ್ದಾರೆ. ಆದರೆ ದೇಶದಲ್ಲಿ ಸಂವಿಧಾನ ಬದಲಿಸಿದ್ರೆ ರಕ್ತಪಾತವಾಗುತ್ತದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ