ಶಿವಮೊಗ್ಗ: ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರಿಗೆ ಕೊರೋನರಿ ಆಂಜಿಯೋಗ್ರಾಂ ಪರೀಕ್ಷೆ ನಡೆಸಲಾಗಿದೆ.
ವಿರೂಪಾಕ್ಷಪ್ಪ ತಿಳಿಸಿದರು.
ಪ್ರೌಢಶಾಲೆ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧಿತರಾಗಿರುವ ಮುರುಘಾ ಶರಣರನ್ನು ನ್ಯಾಯಾಲಯದ ಆದೇಶದಂತೆ ಹೃದಯ ತಪಾಸಣೆಗಾಗಿ ಬುಧವಾರ ರಾತ್ರಿ ಚಿತ್ರದುರ್ಗದಿಂದ ಶಿವಮೊಗ್ಗಕ್ಕೆ ಕರೆತಂದು ಇಲ್ಲಿನ ಮೆಗ್ಗಾನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಶಿವಮೂರ್ತಿ ಶರಣರಿಗೆ ಆಸ್ಪತ್ರೆಯಲ್ಲಿ ನೀಡಿರುವ ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಿದ ಡಾ.ವಿರೂಪಾಕ್ಷಪ್ಪ, ‘ಶರಣರ ಆರೋಗ್ಯದ ಸ್ಥಿತಿಗತಿಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು. ಹೃದಯ ತಜ್ಞರಾದ ಡಾ. ಮಹೇಶ್ ಮೂರ್ತಿ, ಡಾ. ಪರಮೇಶ್ವರ್ ಶ್ರೀಗಳ ಆರೋಗ್ಯದ ಬಗ್ಗೆ ನಿಗಾ ವಹಿಸಿದ್ದಾರೆ’ ಎಂದು ತಿಳಿಸಿದರು.
Laxmi News 24×7