Breaking News

ರಸ್ತೆ‌ ಪಕ್ಕ ನಿಲ್ಲಿಸಿದ್ದ ಬೈಕ್ ಕಳ್ಳತನ: ಸಿಸಿಟಿವಿ ದೃಶ್ಯ

Spread the love

ಬೆಳಗಾವಿ: ರಸ್ತೆ‌ ಪಕ್ಕ ನಿಲ್ಲಿಸಲಾಗಿದ್ದ ಬೈಕ್ ಕಳ್ಳತನ ಮಾಡಿರುವ ಘಟನೆ ಬೆಳಗಾವಿ ‌ಜಿಲ್ಲೆಯ ಬೈಲಹೊಂಗಲ ‌ಪಟ್ಟಣದಲ್ಲಿ ನಡೆದಿದೆ. ಬೈಲಹೊಂಗಲ ಪಟ್ಟಣದ ಕೇಂದ್ರ ಬಸ್ ನಿಲ್ದಾಣ ಸಮೀಪದ ಕೆನರಾ ಬ್ಯಾಂಕ್ ಎದುರು ಬೈಕ್ ನಿಲ್ಲಿಸಲಾಗಿತ್ತು. ನಿಲ್ಲಿಸಿದ್ದ ದ್ವಿ-ಚಕ್ರ ವಾಹನವನ್ನು ವ್ಯಕ್ತಿಯೊಬ್ಬ ಕದ್ದು ಪರಾರಿಯಾಗಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಈ ಬೈಕ್​ ಪಟ್ಟಣದ ಅನ್ನಪೂರ್ಣೇಶ್ವರಿ ಖಾನಾವಳಿ ಮಾಲೀಕ ವಿಜಯಕುಮಾರ ರಾಜಗೋಳಿ ಎಂಬುವರಿಗೆ ಸೇರಿದ್ದಾಗಿದೆ. ಬಜಾಜ್ ಕಂಪನಿಯ ಪ್ಲಾಟಿನಾ ಬೈಕ್ ಸೆ.17 ರಂದು ಸಂಜೆ ಕಳ್ಳ ಎಗರಿಸಿದ್ದ. ಬೈಕ್ ಮಾಲೀಕ ಎಷ್ಟೇ ಹುಡುಕಿದರೂ ಸಿಕ್ಕಿರಲಿಲ್ಲ. ಬಳಿಕ ಸಿಸಿ ಕ್ಯಾಮರಾ ಪರಿಶೀಲಿಸಿದಾಗ ಬೈಕ್ ಕಳುವಾದ ಬಗ್ಗೆ ಗೊತ್ತಾಗಿದೆ. ಈ ಕುರಿತು ವಿಜಯಕುಮಾರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬೈಲಹೊಂಗಲ ‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಅಲಿ ಖಮೇನಿ ಪೋಸ್ಟರ್ ವಿರುದ್ಧ ಶ್ರೀರಾಮ ಸೇನೆಯಿಂದ ಶಿವಾಜಿ ಹಾಗೂ ಮೋದಿ ಬ್ಯಾನರ್ ಅಭಿಯಾನ

Spread the loveಬೆಳಗಾವಿ : ನಗರದಲ್ಲಿ ಅಳವಡಿಸಿರುವ ಇರಾನ್ ದೇಶದ ಅಲಿ ಖಮೇನಿ ಪೋಸ್ಟರ್ ವಿರುದ್ಧ ಶ್ರೀರಾಮ ಸೇನೆಯಿಂದ ಆಫ್ಜಲ್‌ಖಾನ್‌ನ ವಧೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ