Breaking News

ಮುರುಘಾ ಶ್ರೀಗಳ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

Spread the love

ಚಿತ್ರದುರ್ಗ: ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ಜಾಮೀನು ಅರ್ಜಿಯನ್ನು ನ್ಯಾಯಾಲಯವು ಶುಕ್ರವಾರ ತಿರಸ್ಕರಿಸಿದೆ. ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿದ್ದು, ಈ ಹಿಂದಿನ ಆದೇಶದಂತೆ ಸೆ. 27ರವರೆಗೆ ಶ್ರೀಗಳಿಗೆ ನ್ಯಾಯಾಂಗ ಬಂಧನ ಅವಧಿ ಮುಂದುವರೆಯಲಿದೆ.

ಈ ಹಿಂದೆ ಸೆ.14ರಂದು ಸ್ವಾಮೀಜಿಯ ನ್ಯಾಯಾಂಗ ಬಂಧನ ಅಂತ್ಯ ಹಿನ್ನೆಲೆಯಲ್ಲಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್​​ ಕೋರ್ಟ್​ಗೆ ಹಾಜರುಪಡಿಸಲಾಗಿತ್ತು. ಆಗ ನ್ಯಾಯಾಲಯವು​​ ನ್ಯಾಯಾಂಗ ಬಂಧನದ ಅವಧಿಯನ್ನು​ ಸೆ. 27ರವರೆಗೆ ವಿಸ್ತರಿಸಿತ್ತು.

ನ್ಯಾಯಾಂಗ ಬಂಧನ ವಿಸ್ತರಣೆ ಹಿನ್ನೆಲೆಯಲ್ಲಿ ಜಾಮೀನು ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಈ ಅರ್ಜಿಯನ್ನು ತಿರಸ್ಕರಿಸಿ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಕೆ. ಕೋಮಲಾ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.


Spread the love

About Laxminews 24x7

Check Also

ಹಾಸನ ಜನರ ಹೃದಯ ಹಿಂಡುತ್ತಿರುವ ಹೃದಯಾಘಾತ: ಕೊನೆಗೂ ಎಚ್ಚೆತ್ತ ಜಿಲ್ಲಾಡಳಿತ

Spread the loveಹಾಸನ, ಜೂನ್​ 30: ಹಾಸನ (Hassan) ಜಿಲ್ಲೆಯಲ್ಲಿ ಹೃದಯಘಾತದಿಂದ (Heart Attack) ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಹಾಸನ ಜಿಲ್ಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ