ಬೆಂಗಳೂರು: 15,000 ಶಿಕ್ಷಕರ ನೇಮಕಾತಿ ಪರೀಕ್ಷೆ ಫಲಿತಾಂಶ ಆಧರಿಸಿ ಮುಂದಿನ ವಾರಾಂತ್ಯದೊಳಗೆ 1:2 ಆಧಾರದಲ್ಲಿ ಅಭ್ಯರ್ಥಿಗಳ ಪರಿಶೀಲನಾ ಪಟ್ಟಿ ಪ್ರಕಟಿಸಲಾಗುತ್ತದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಪ್ರತಿ ಹುದ್ದೆಗೆ ಇಬ್ಬರು ಅಭ್ಯರ್ಥಿಗಳ ಆಯ್ಕೆಯಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ನಂತರ ಒಂದು ಹುದ್ದೆಗೆ ಒಬ್ಬರಂತೆ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು. ಶೀಘ್ರವೇ ಹೊಸ ಶಿಕ್ಷಕರ ನೇಮಕಾತಿ ಪೂರ್ಣಗೊಳಿಸಿ ಶಾಲೆಗಳಿಗೆ ಶಿಕ್ಷಕರನ್ನು ನಿಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.
Laxmi News 24×7