ಬೆಳಗಾವಿ ಎಸ್ಪಿ ಡಾ.ಸಂಜೀವ್ ಪಾಟೀಲ್ ಅವರ ಹೆಸರಿನಲ್ಲಿ ಸೈಬರ್ ಖದೀಮರು ಇನ್ಸಟಾ ಗ್ರಾಂ ನಕಲಿ ಖಾತೆ ತೆರೆದು ಸಾರ್ವಜನಿಕರಲ್ಲಿ ಹಣ ಕೇಳಿರುವ ಘಟನೆ ಬೆಳಕಿಗೆ ಬಂದಿದೆ.
ಹೌದು ಫೇಸ್‍ಬುಕ್, ಇನ್ಸಟಾ ಸೇರಿ ಇನ್ನಿತರ ಸಾಮಾಜಿಕ ಜಾಲತಾಣಗಳಲ್ಲಿ ಖಾತೆ ಹೊಂದಿರುವ ಬಹಳಷ್ಟು ಜನರ ಖಾತೆಗಳನ್ನು ಸೈಬರ್ ಖದೀಮರು ಹ್ಯಾಕ್ ಮಾಡುವುದು. ಅವರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಹಣ ಕೇಳುವುದು ಇತ್ತಿಚಿಗೆ ಸಾಮಾನ್ಯವಾಗಿ ಬಿಟ್ಟಿದೆ.
ಇದೀಗ ಬೆಳಗಾವಿಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ್ ಪಾಟೀಲ್ ಅವರ ಇನ್ಸಟಾ ಖಾತೆಯನ್ನೂ ಖದೀಮರು ಹ್ಯಾಕ್ ಮಾಡಿರುವುದು ಬಹಿರಂಗವಾಗಿದೆ.