ಜಮ್ಮು ಕಾಶ್ಮೀರದ ಗುರೇಜ್ ನಲ್ಲಿ ರಾಜ್ಯದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.
ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಬೇಡಕುಂದಾ ಗ್ರಾಮದ ಯೋಧ ರಾಮ್ ದಾಸ್ ಚಂದಾಪುರ ಹುತಾತ್ಮರಾಗಿದ್ದು, ಕರ್ತವ್ಯದ ವೇಳೆ ಆಮ್ಲಜನಕ ಕೊರತೆಯಿಂದ ಯೋಧ ಹುತಾತ್ಮರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
15 ವರ್ಷದಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದು ಬಂದಿದೆ.