Breaking News

ರಾಷ್ಟ್ರಪತಿಗೆ ಸ್ವಾಗತ ಕೋರುವ ಬ್ಯಾನರ್‌ನಲ್ಲಿ ಎಡವಟ್ಟು ಮಾಡಿಕೊಂಡ ಶಾಸಕ

Spread the love

ಧಾರವಾಡ: ರಾಷ್ಟ್ರಪತಿಗೆ ಸ್ವಾಗತ ಕೋರುವ ತರಾತುರಿಯಲ್ಲಿ ನಗರದ ಶಾಸಕರೊಬ್ಬರು ಎಡವಟ್ಟು ಮಾಡಿಕೊಂಡಿದ್ದಾರೆ. ಭಾರತದ ಮೊದಲ ಮಹಿಳಾ ರಾಷ್ಟ್ರಪತಿ ದ್ರೌಪದಿ ಮುರ್ಮು ಎಂದು ಬ್ಯಾನರ್‌ನಲ್ಲಿ ಬರೆಸಿರುವುದು ಟೀಕೆಗೆ ಕಾರಣವಾಗಿದೆ.

ಸೆ.26ರಂದು ದಸರಾ ಉದ್ಘಾಟನೆಗೆ ಮೈಸೂರಿಗೆ ಆಗಮಿಸಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಬಳಿಕ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ಆಯೋಜಿಸಿರುವ ʼಪೌರ ಸನ್ಮಾನʼ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಆದರೆ, ರಾಷ್ಟ್ರಪತಿ ಸ್ವಾಗತದ ಕೋರುವ ತರಾತುರಿಯಲ್ಲಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ್ ಅವರು, ಸ್ವಾಗತ ಕೋರಿರುವ ಬ್ಯಾನರ್‌ನಲ್ಲಿ ಭಾರತದ ಮೊದಲ ಮಹಿಳಾ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸ್ವಾಗತ ಎಂದು ಮುದ್ರಿಸಲಾಗಿದೆ. ಧಾರವಾಡದ ಹಲವು ಭಾಗಗಳಲ್ಲಿ ಇಂತಹ ಬ್ಯಾನರ್‌ಗಳನ್ನು ಅಳವಡಿಸಿರುವುದು ಕಂಡುಬಂದಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ