ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿದ್ದ ರಾಜ್ಯದ ಜನತೆಗೆ ಸಿಎಂ ಬಸವರಾಜ ಬೊಮ್ಮಾಯಿ ನೆಮ್ಮದಿಯ ಸುದ್ದಿ ನೀಡಿದ್ದು, ಹಾಲಿನ ಬೆಲೆ ಹೆಚ್ಚಳದ ಕೆಎಂಎಫ್ ಪ್ರಸ್ತಾವನೆಗೆ ಸಿಎಂ ಬಸವರಾಜ ಬೊಮ್ಮಾಯಿ ಬ್ರೇಕ್ ಹಾಕಿದ್ದಾರೆ.
ಹಾಲಿನ ಬೆಲೆಯನ್ನು ಪ್ರತಿ ಲೀಟರ್ ಗೆ 3 ರೂ. ಹೆಚ್ಚಳ ಮಾಡುವಂತೆ ಕೆಎಂಎಫ್ ಸಲ್ಲಿಸಿರುವ ಪ್ರಸ್ತಾವನೆಗೆ ಸಿಎಂ ಬಸವರಾಜ ಬೊಮ್ಮಾಯಿ ಒಪ್ಪಿಗೆ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.
ಹಾಲಿನ ಬೆಲೆ ಹೆಚ್ಚಳ ಮಾಡುವುದರಿಂದ ಗ್ರಾಹಕರಿಗೆ ಹೊರೆಯಾಗಲಿದೆ. ಆದ್ದರಿಂದ ಪರ್ಯಾಯ ಮಾರ್ಗಗಳನ್ನು ಹುಡುಕಿ ಹಾಲು ಉತ್ಪನ್ನಗಳನ್ನು ಮಾರಾಟ ಮಾಡಲು ಮಾರುಕಟ್ಟೆ ವಿಸ್ತರಿಸಿಕೊಳ್ಳುವಂತೆ ಸಿಎಂ ಬಸವರಾಜ ಬೊಮ್ಮಾಯಿ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
Laxmi News 24×7