ಬೆಂಗಳೂರು: ಮುಖ್ಯಮಂತ್ರಿ ಬೊಮ್ಮಾಯಿ ಅವರೇ, “ಸರಕಾರಿ ಕಚೇರಿಗಳಲ್ಲಿ ಲಂಚ ಕೊಡಬೇಕಾಗಿಲ್ಲ’ ಎಂಬ ಬೋರ್ಡ್ ಅಳವಡಿಸುವ ಮೊದಲು ಎಲ್ಲ ಸರಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಸಿಸಿ ಕೆಮರಾಗಳನ್ನು ಅಳವಡಿಸಿ. ನೊಂದ ಜನರು ದೂರು ಕೊಟ್ಟರೆ ಭ್ರಷ್ಟ ಅಧಿಕಾರಿಗಳ ವಿರುದ್ಧ ತತ್‌ಕ್ಷಣ ಕ್ರಮ ಕೈಗೊಳ್ಳಿ ಎಂದು ವಿಪಕ್ಷದ ನಾಯಕ ಸಿದ್ದರಾಮಯ್ಯ ಟ್ವಿಟರ್‌ನಲ್ಲಿ ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿಯವರೇ, ಈ ಬೋರ್ಡ್ ಬರೆಸಿ ಹಾಕುವ ನಾಟಕಗಳನ್ನೆಲ್ಲ ನಿಲ್ಲಿಸಿ. ಮೊದಲು 40 ಪರ್ಸೆಂಟ್ ಕಮಿಷನ್ ಆರೋಪ ಸಹಿತ ಸಚಿವರ ಮೇಲಿನ ಭ್ರಷ್ಟಾಚಾರದ ಆರೋಪಗಳ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶ ಹೊರಡಿಸಿ ಎಂದು ಕುಟುಕಿದ್ದಾರೆ.
Laxmi News 24×7