ಬಳ್ಳಾರಿ : ನಗರದ ರೇಡಿಯೋ ಪಾರ್ಕ್ ವೃತ್ತದಲ್ಲಿ ಅಕ್ಕಿ ವ್ಯಾಪಾರಿ ಮಟ್ಕಾ ಬುಕ್ಕಿ ಕುಂಟ ಮಂಜುನಾಥ ಎನ್ನುವವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಕೊಲೆ ಮಾಡಿರುವ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ.
ನಗರದ ಕೊಲಿಮಿ ಬಜಾರ್ ನಿವಾಸಿಯಾದ ಕುಂಟ ಮಂಜುನಾಥ್ ನನ್ನು ರೇಡಿಯೋ ಪಾರ್ಕ್ ಅಯ್ಯಪ್ಪ ಸ್ವಾಮಿ ದೇವಸ್ಥಾನ ಬಳಿ ಬುಧವಾರ ಬೆಳಗಿನ ಜಾವ ಅಡ್ಡಗಟ್ಟಿದ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ.
ಈ ವೇಳೆ ತಪ್ಪಿಸಿಕೊಂಡು ಓಡಿ ಹೋಗಲು ಯತ್ನಿಸಿದ ಮಂಜುನಾಥ್ ನನ್ನು ಹಿಂಬಾಲಿಸಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಘಟನಾ ಸ್ಥಳಕ್ಕೆ ಬುಧವಾರ ಬೆಳಗ್ಗೆ ಎಸ್ ಪಿ ಸೈದುಲು ಅಡಾವತ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ಬರು ದುಷ್ಕಮಿಗಳು ಬೈಕ್ ನಲ್ಲಿ ಬಂದು ಕೃತ್ಯ ಎಸಗಿದ್ದಾರೆ. ಕೊಲೆ ಮಾಡುವ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ. ದೃಶ್ಯಗಳನ್ನ ಆಧರಿಸಿ ಆರೋಪಿಗಳನ್ನು ಪತ್ತೆ ಹಚ್ಚಲು ಬಲೆ ಬೀಸಲಾಗಿದೆ ಎಂದು ತಿಳಿಸಿದ್ದಾರೆ.
Laxmi News 24×7